ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಭಾರತವನ್ನು ಆಹ್ವಾನಿಸಿದ್ದಾರೆ. ಜಾನ್ಸನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಶೃಂಗಸಭೆಗೆ ಆಹ್ವಾನಿಸಿ ಪತ್ರವೊಂದನ್ನು ಕಳುಹಿಸಿದ್ದಾರೆ.
ಯುಕೆ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಅವರು ಮೋದಿಯವರನ್ನು ಭೇಟಿಯಾಗಿ ಪತ್ರವನ್ನು ನವದೆಹಲಿಯಲ್ಲಿ ಹಸ್ತಾಂತರಿಸಿದರು.
ಪ್ರಧಾನಿ ಮೋದಿ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ರಾಬ್ ಹೇಳಿದ್ದಾರೆ.
ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯ ನಂತರ ಮಾತನಾಡಿದ ರಾಬ್, ಮುಂದಿನ ವರ್ಷ ಯುಕೆ ಆತಿಥ್ಯ ವಹಿಸಲಿರುವ ಜಿ 7 ಶೃಂಗಸಭೆಯಲ್ಲಿ ಭಾಗಿಯಾಗುವಂತೆ ಪ್ರಧಾನಿ ಮೋದಿಯವರಿಗೆ ಆಹ್ವಾನವನ್ನು ನೀಡಲು ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.
ದಕ್ಷಿಣ ಕೊರಿಯಾ ಮತ್ತು ಆಸ್ಟ್ರೇಲಿಯಾದ ಜೊತೆಗೆ ಮೂರು ಅತಿಥಿ ರಾಷ್ಟ್ರಗಳಲ್ಲಿ ಒಂದಾಗಿ ಭಾರತವನ್ನು ಆಹ್ವಾನಿಸುತ್ತಿದ್ದೇವೆ ಎಂದು ಜಾನ್ಸನ್ ಮೋದಿಗೆ ಪತ್ರ ಬರೆದಿದ್ದಾರೆ ಎಂದು ಬ್ರಿಟಿಷ್ ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. ಹಂಚಿಕೆಯ ಹಿತಾಸಕ್ತಿಗಳನ್ನು ಮುನ್ನಡೆಸಲು ಮತ್ತು ಸಾಮಾನ್ಯ ಸವಾಲುಗಳನ್ನು ನಿಭಾಯಿಸಲು ಸಮಾನ ಮನಸ್ಕ ಪ್ರಜಾಪ್ರಭುತ್ವಗಳ ಗುಂಪಿನೊಂದಿಗೆ ಕೆಲಸ ಮಾಡುವ ಜಾನ್ಸನ್ ಅವರ ಮಹತ್ವಾಕಾಂಕ್ಷೆಗೆ ಅನುಗುಣವಾಗಿ ಈ ಆಹ್ವಾನ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಜಿ7 ಸದಸ್ಯರಲ್ಲಿ ಯುಎಸ್, ಕೆನಡಾ, ಯುಕೆ, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಜಪಾನ್ ಸೇರಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.