ನವದೆಹಲಿ: ಸಂಸ್ಕೃತವನ್ನು ಭಾರತದ ರಾಷ್ಟ್ರೀಯ ಭಾಷೆ ಎಂದು ಘೋಷಿಸುವಂತೆ ಕೋರಿ ಗುಜರಾತ್ ಸರ್ಕಾರದ ಮಾಜಿ ಹೆಚ್ಚುವರಿ ಕಾರ್ಯದರ್ಶಿ ಕೆ.ಸಿ.ವಾಂಜಾರ ಅವರು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿದಾರರು ಸಂಸ್ಕೃತವನ್ನು ಭಾರತದ ರಾಷ್ಟ್ರೀಯ ಭಾಷೆ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ನೀಡಬೇಕೆಂದು ಕೋರಿದ್ದಾರೆ.
ಪ್ರಸ್ತುತ ಸಾಂವಿಧಾನಿಕ ಚೌಕಟ್ಟಿಗೆ ತೊಂದರೆಯಾಗದಂತೆ ಇದನ್ನು ಕೇವಲ ಒಂದು ಕಾಯ್ದೆ ಅಥವಾ ಕಾರ್ಯನಿರ್ವಾಹಕ ಆದೇಶದ ಮೂಲಕ ಘೋಷಿಸಬಹುದು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. “ಅಧಿಕೃತ ಭಾಷೆಯನ್ನು ರಾಷ್ಟ್ರೀಯ ಭಾಷೆಯೊಂದಿಗೆ ಸಮೀಕರಿಸಬಾರದು. ಎರಡೂ ಖಂಡಿತವಾಗಿಯೂ ಪ್ರತ್ಯೇಕವಾಗಿದೆ” ಎಂದು ವಂಜಾರಾ ಹೇಳಿದ್ದಾರೆ.
“ಸಂಸ್ಕೃತ ಜೈವಿಕ ವೈಜ್ಞಾನಿಕ ಉಚ್ಚಾರಣಾ ರಚನೆಯನ್ನು ಹೊಂದಿದೆ, ಇದು ಮೆದುಳನ್ನು ಅಭಿವೃದ್ಧಿಪಡಿಸುತ್ತದೆ, ಮಕ್ಕಳಲ್ಲಿ ಲಯಬದ್ಧ ಉಚ್ಚಾರಣೆ ಮತ್ತು ಕಂಠಪಾಠ ಮಾಡುವ ಸಾಮರ್ಥ್ಯವನ್ನು ವೃದ್ಧಿಸುತ್ತದೆ” ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.