ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಮುಂದಿನ ಎರಡು ವರ್ಷಗಳಲ್ಲಿ ಇಡೀ ರಾಷ್ಟ್ರವು ಟೋಲ್ ಪ್ಲಾಜಾಗಳಿಂದ ಮುಕ್ತವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಘೋಷಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
“ರಷ್ಯಾ ಸಹಾಯದಿಂದ ಸರ್ಕಾರ ಜಿಪಿಎಸ್ ಆಧಾರಿತ ವ್ಯವಸ್ಥೆಯನ್ನು ಒಪ್ಪಿಕೊಂಡಿದೆ ಮತ್ತು ಮುಂದಿನ ಎರಡು ವರ್ಷಗಳಲ್ಲಿ ತಂತ್ರಜ್ಞಾನದ ಆಧಾರದ ಮೇಲೆ ಟೋಲ್ ಸಂಗ್ರಹಿಸಲು ಪ್ರಾರಂಭಿಸುವುದಾಗಿ ಗಡ್ಕರಿ ಘೋಷಿಸಿದ್ದಾರೆ. ಇದು ರಾಷ್ಟ್ರದಾದ್ಯಂತ ವಾಹನಗಳ ತಡೆರಹಿತ ಚಲನೆಯನ್ನು ಖಚಿತಪಡಿಸುತ್ತದೆ. ಎರಡು ವರ್ಷಗಳಲ್ಲಿ ಭಾರತವು ಟೋಲ್ ಪ್ಲಾಜಾಗಳಿಂದ ಮುಕ್ತವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.
ವಾಹನಗಳ ಚಲನೆಯನ್ನು ಆಧರಿಸಿ ಟೋಲ್ ಮೊತ್ತವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಂದ ಕಡಿತಗೊಳಿಸಲಾಗುವುದು ಎಂದು ಗಡ್ಕರಿ ಹೇಳಿದರು. ಈ ವ್ಯವಸ್ಥೆಯನ್ನು ಸ್ಥಾಪಿಸಿದ ನಂತರ, ಮುಂದಿನ ಐದು ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಟೋಲ್ ಆದಾಯ 1,34,000 ಕೋಟಿ ರೂ.ಗೆ ಏರಿಕೆಯಾಗುವ ನಿರೀಕ್ಷೆಯಿದೆ. ಇದು ಹಣಕಾಸು ವರ್ಷ 20 ರಲ್ಲಿ ಸಾಧಿಸಿದ ಸುಮಾರು 24,000 ಕೋಟಿ ರೂ.ಗಳ ಟೋಲ್ ಸಂಗ್ರಹಕ್ಕಿಂತ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ಎನ್ಎಚ್ಎಐನ ಟೋಲ್ ಸಂಗ್ರಹವು 34,000 ಕೋಟಿ ರೂ.ಆಗಿದೆ.
ರಾಷ್ಟ್ರದ ಎಲ್ಲಾ ವಾಣಿಜ್ಯ ವಾಹನಗಳು ವಾಹನ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಹೊಂದಿದ್ದರೆ, ಇತರ ವಾಹನಗಳಲ್ಲಿ ಜಿಪಿಎಸ್ ತಂತ್ರಜ್ಞಾನವನ್ನು ಅಳವಡಿಸಲು ಸರ್ಕಾರ ಕೆಲವು ಯೋಜನೆಯನ್ನು ರೂಪಿಸಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.