ಕೋಲ್ಕತ್ತಾ: ಪಶ್ಚಿಮಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಒಂದರ ಹಿಂದೆ ಮತ್ತೊಂದು ಎಂಬಂತೆ ಹೊಡೆತ ಬೀಳುತ್ತಲೇ ಇದೆ.ಆ ಪಕ್ಷದ ಮತ್ತೊಬ್ಬ ಶಾಸಕ ಜಿತೇಂದ್ರ ತಿವಾರಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ಟಿಎಂಸಿ ಶಾಸಕ ಜಿತೇಂದ್ರ ತಿವಾರಿ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಅಸನ್ಸೋಲ್ ಮುನ್ಸಿಪಲ್ ಕಾರ್ಪೊರೇಶನ್ನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ನನಗೆ ಕೆಲಸ ಮಾಡಲು ಅವಕಾಶವಿಲ್ಲ ಎಂದಾದ ಮೇಲೆ ನಾನು ಈ ಹುದ್ದೆ ಹಿಡಿದುಕೊಂಡು ಏನು ಮಾಡಲಿ? ಟಿಎಂಸಿಯಲ್ಲಿ ಮುಂದುವರಿಯುವುದರಲ್ಲಿ ಯಾವುದೇ ಅರ್ಥವಿಲ್ಲ. ಆದ್ದರಿಂದ, ನಾನು ರಾಜೀನಾಮೆ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ.
ಹಿರಿಯ ಟಿಎಂಸಿ ಸದಸ್ಯ ಸುವೇಂದು ಅಧಿಕಾರಿ ಪಕ್ಷಕ್ಕೆ ರಾಜೀನಾಮೆ ನೀಡಿದ 24 ಗಂಟೆಗಳಲ್ಲಿ ತಿವಾರಿ ರಾಜೀನಾಮೆ ಘೋಷಿಸಿದ್ದಾರೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆಗೆ ಪಶ್ಚಿಮ ಬಂಗಾಳ ಸಜ್ಜಾಗಲಿರುವ ಸಂದರ್ಭದಲ್ಲಿ ಟಿಎಂಸಿಗೆ ಇದು ದೊಡ್ಡ ಆಘಾತವಾಗಿದೆ.
ಇಷ್ಟೇ ಅಲ್ಲದೆ, ಇನ್ನೂ ಹಲವಾರು ಟಿಎಂಸಿ ಕಾರ್ಯಕರ್ತರು ಮತ್ತು ನಾಯಕರು ಟಿಎಂಸಿ ತೊರೆದು ಬಿಜೆಪಿ ಸೇರುವ ಹಾದಿಯಲ್ಲಿ ಇದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.