ಕೊಲ್ಕತ್ತಾ: ಬಿಜೆಪಿ ಮುಖಂಡ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದಿನಿಂದ ಎರಡು ದಿನಗಳ ಪಶ್ಚಿಮಬಂಗಾಳ ಪ್ರವಾಸ ನಡೆಸಲಿದ್ದಾರೆ. ಪಕ್ಷದ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಮತ್ತು ಗ್ರಾಮೀಣ ಪ್ರದೇಶದಲ್ಲಿ ಪಕ್ಷದ ಸಾಂಸ್ಥಿಕ ಬೆಂಬಲವನ್ನು ಬಲಪಡಿಸಲು ಎರಡು ದಿನಗಳ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.
ಪಶ್ಚಿಮ ಬಂಗಾಳದಲ್ಲಿ ಹೈ ವೋಲ್ಟೇಜ್ 2021ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ.
ತೃಣಮೂಲ ಕಾಂಗ್ರೆಸ್ ಅನ್ನು ತ್ಯಜಿಸಿರುವ ಪ್ರಬಲ ರಾಜಕೀಯ ನಾಯಕ ಸುವೇಂದು ಅಧಿಕಾರಿ, ಶಾ ಅವರ ಭೇಟಿಯ ಸಮಯದಲ್ಲಿ ಬಿಜೆಪಿಗೆ ಸೇರಬಹುದು ಮತ್ತು ಅವರೊಂದಿಗೆ ಕೆಲವು ಬೆಂಬಲಿಗರು ಕೂಡ ಸೇರಬಹುದು ಎಂಬ ನಿರೀಕ್ಷೆ ಇದೆ.
ಎರಡು ದಿನಗಳ ಭೇಟಿಯ ಸಮಯದಲ್ಲಿ ಶಾ ರೋಡ್ ಶೋಗಳನ್ನು ನಡೆಸಲಿದ್ದಾರೆ. ಮಿಡ್ನಾಪೋರ್ ಮತ್ತು ಬಿರ್ಭುಮ್ನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ. ಬಂಗಾಳಿ ಜಾನಪದ ಗಾಯಕನ ಮನೆಯಲ್ಲಿ ಊಟ ಮಾಡಲಿದ್ದಾರೆ. ರೈತರ ಮನೆಗಳಿಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.