ನವದೆಹಲಿ: ಇಂಡಿಯಾ ಇಂಟರ್ನ್ಯಾಷನಲ್ ಸೈನ್ಸ್ ಫೆಸ್ಟಿವಲ್ (ಐಐಎಸ್ಎಫ್) 2020 ಅನ್ನು ಡಿಸೆಂಬರ್ 22 ರಿಂದ ವರ್ಚುವಲ್ ಪ್ಲಾಟ್ಫಾರ್ಮ್ಗಳಲ್ಲಿ ಆಯೋಜಿಸಲಾಗುತ್ತಿದೆ. ವರ್ಚುವಲ್ ಪ್ಲಾಟ್ಫಾರ್ಮ್ನಲ್ಲಿ ನಡೆಯಲಿರುವ ಅತಿದೊಡ್ಡ ವಿಜ್ಞಾನ ಉತ್ಸವ ಇದಾಗಿದೆ. ಈ ವರ್ಷದ ಉತ್ಸವದ ಮುಖ್ಯ ವಿಷಯವೆಂದರೆ “ ಸ್ವಾವಲಂಬಿ ಭಾರತ ಮತ್ತು ಜಾಗತಿಕ ಕಲ್ಯಾಣಕ್ಕಾಗಿ ವಿಜ್ಞಾನ”.
ವಿಶ್ವಪ್ರಸಿದ್ಧ ಭಾರತೀಯ ಗಣಿತಜ್ಞ ಶ್ರೀನಿವಾಸ್ ರಾಮಾನುಜಂ ಅವರ ಜನ್ಮದಿನವಾದ ಡಿಸೆಂಬರ್ 22 ರಂದು ಈ ಉತ್ಸವವು ಪ್ರಾರಂಭವಾಗುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲಕ ಅಭಿವೃದ್ಧಿ ಸಾಧ್ಯ ಎಂಬ ದೃಢ ನಂಬಿಕೆ ಹೊಂದಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25 ರಂದು ಮುಕ್ತಾಯಗೊಳ್ಳುತ್ತದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ನ ಮಹಾನಿರ್ದೇಶಕ ಡಾ. ಶೇಖರ್ ಸಿ. ಮಾಂಡೆ, ವಿಜ್ಞಾನ ಮತ್ತು ತಂತ್ರಜ್ಞಾನದ ವಿವಿಧ ಆಯಾಮಗಳ ಬಗ್ಗೆ ವ್ಯಕ್ತಿಯನ್ನು ಪ್ರೇರೇಪಿಸುವುದು ಐಐಎಸ್ಎಫ್ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
ಐಐಎಸ್ಎಫ್ ವಾರ್ಷಿಕ ಕಾರ್ಯಕ್ರಮವಾಗಿದ್ದು, DST, DBT, MoEF, MoHWF ಮತ್ತು ಭಾರತ ಸರ್ಕಾರದ ಸಿಎಸ್ಐಆರ್ ಮತ್ತು ವಿಜ್ಞಾನ ಭಾರತಿ (VIBHA) ಯಿಂದ ಜಂಟಿಯಾಗಿ ಆಯೋಜಿಸಲ್ಪಟ್ಟಿದೆ ಮತ್ತು ಹೆಚ್ಚಿನ ಸಂಖ್ಯೆಯ ಇತರ ಸಂಸ್ಥೆಗಳ ಬೆಂಬಲವು ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.