ಬೆಂಗಳೂರು: ರಾಜ್ಯದಲ್ಲಿನ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ಅಧಿಸೂಚಿತ ದೇಗುಲಗಳಲ್ಲಿ ಸಂಗ್ರಹವಾಗುವ ಹಣವನ್ನು ಖಾಸಗಿ ವಲಯದಿಂದ ನಿರ್ವಹಣೆ ಮಾಡಲಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಗುಲದ ಹಣ ದುರ್ಬಳಕೆಯಾದಲ್ಲಿ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಇಲಾಖೆ ಎಚ್ಚರಿಕೆ ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಜರಾಯಿ ಇಲಾಖೆ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದ್ದು, ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ ಇರುವ ದೇವಾಲಯಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ರಥೋತ್ಸವ ಸೇರಿದಂತೆ ಇನ್ನಿತರ ಸಮಾರಂಭಗಳಲ್ಲಿ ಖಾಸಗಿಯವರೂ ದೇಗುಲದ ಹೆಸರಲ್ಲಿ ಹುಂಡಿಯನ್ನಿರಿಸಿ ಹಣ ಸಂಗ್ರಹಿಸುವ ಬಗ್ಗೆ ಈಗಾಗಲೇ ಇಲಾಖೆಗೆ ಹಲವು ದೂರುಗಳು ಕೇಳಿ ಬಂದಿವೆ. ಇಂತಹ ವಿಚಾರಗಳು ನಡೆಯುವುದಕ್ಕೆ ಅವಕಾಶ ಕಲ್ಪಿಸಬಾರದು ಎಂದು ಇಲಾಖೆ ಈ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಮುಜರಾಯಿ ಅಡಿಯಲ್ಲಿ ಬರುವ ದೇವಾಲಯಗಳಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿ, ಸಂಘ ಸಂಸ್ಥೆಗಳು, ಅಭಿವೃದ್ಧಿ ಸಂಸ್ಥೆಗಳು ಸೇವಾ ನಿಧಿಯನ್ನು ಸಂಗ್ರಹಿಸುವ ಅಥವಾ ದೇಣಿಗೆ ಸಂಗ್ರಹಿಸುವ ಅವಕಾಶ ಇಲ್ಲ. ಇಂತಹ ವಿಚಾರಗಳಲ್ಲಿ ಯಾರೇ ಭಾಗಿಗಳಾದರೂ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಈ ಸಂಬಂಧ ದೇವಾಲಯಗಳ ಆಡಳಿತ ಮಂಡಳಿ, ಸಂಬಂಧಪಟ್ಟ ವ್ಯಕ್ತಿಗಳಿಗೂ ಸೂಚನೆ ನೀಡಿರುವುದಾಗಿ ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.