ನವದೆಹಲಿ: ಹಲವಾರು ಕೋವಿಡ್ ಲಸಿಕೆಗಳ ಪ್ರಯೋಗಗಳು ಭಾರತದಲ್ಲಿ ಪ್ರಗತಿಯಲ್ಲಿದ್ದು, ಭಾರತೀಯ ರೈಲ್ವೆ ತನ್ನ ಶೈತ್ಯೀಕರಿಸಿದ ವ್ಯಾಗನ್ಗಳ ಮೂಲಕ ದೇಶದಾದ್ಯಂತ ಈ ಲಸಿಕೆಗಳನ್ನು ಸಾಗಿಸುವ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ.
ಆದರೆ, ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಲಸಿಕೆ ಸಾಗಿಸಲು ನಿರ್ಧಾರ ತೆಗೆದುಕೊಂಡ ನಂತರ ಈ ಬಗ್ಗೆ ಪ್ರಕಟಿಸುವುದಾಗಿ ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲಸಿಕೆ ಸಾಗಣೆಗೆ “ತಾಂತ್ರಿಕ ಸಮಸ್ಯೆಗಳು” ಇವೆ ಈ ಅಂಶಗಳನ್ನು ಚರ್ಚಿಸಲಾಗುತ್ತಿದೆ. ಆದ್ದರಿಂದ ನಿರ್ಧಾರ ತೆಗೆದುಕೊಂಡ ನಂತರ ನಾವು ಎಲ್ಲರನ್ನೂ ತಿಳಿಸುತ್ತೇವೆ ಎಂದು ಅಧಿಕಾರಿ ಹೇಳಿದ್ದಾರೆ.
ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಸಿಇಒ ವಿ.ಕೆ.ಯಾದವ್ ಅವರು ಮಾತನಾಡಿ, “ನಾವು ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಮತ್ತು ಸಾಧ್ಯತೆಗಳ ಬಗ್ಗೆ ಚರ್ಚಿಸುತ್ತಿದ್ದೇವೆ” ಎಂದಿದ್ದಾರೆ.
“ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಕೋವಿಡ್ ಲಸಿಕೆಗಳ ಸಾಗಣೆಗಾಗಿ ನಾವು ಹಲವಾರು ಸಚಿವಾಲಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ” ಎಂದು ಯಾದವ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.