ನವದೆಹಲಿ: ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಸರ್ಕಾರವು ಕೋವಿಡ್ ಲಸಿಕೆಯನ್ನು 30 ಕೋಟಿ ಜನರಿಗೆ ನೀಡಲು ಆದ್ಯತೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ. ಈ 30 ಕೋಟಿಯಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಾದ ಪೊಲೀಸರು, ಮಿಲಿಟರಿ ಮತ್ತು ನೈರ್ಮಲ್ಯ ಸಿಬ್ಬಂದಿಗಳು ಸೇರಿದ್ದಾರೆ.
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಡಾ.ಹರ್ಷವರ್ಧನ್ ಅವರು, 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಕೆಲವು ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುವುದು. ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವವೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಮತ್ತು ನಾವು ಅದರ ಬಗ್ಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ವರ್ಷದ ಜನವರಿಯ ಯಾವುದೇ ವಾರದಲ್ಲಿ, ಭಾರತದ ಜನರಿಗೆ ಮೊದಲ ಕೋವಿಡ್ ಲಸಿಕೆ ಶಾಟ್ ನೀಡಬಹುದು ಎಂದು ನಾನು ವೈಯಕ್ತಿಕವಾಗಿ ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಅಭಿವೃದ್ಧಿ ಹೊಂದಿದ ದೇಶಗಳಾದ ಯುಎಸ್ ಮತ್ತು ಯುಕೆಗಳಿಗೆ ಹೋಲಿಕೆ ಮಾಡಿದರೆ, ಭಾರತದಲ್ಲಿ ಇದುವರೆಗೆ 1,00,31,223 ಪ್ರಕರಣಗಳು ದಾಖಲಾಗಿವೆ, ಅದರಲ್ಲಿ 95 ಲಕ್ಷಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. ಭಾರತವು ಅತಿ ಹೆಚ್ಚು ಚೇತರಿಕೆ ಪ್ರಮಾಣವನ್ನು ಹೊಂದಿದೆ ಮತ್ತು ಗಮನಾರ್ಹವಾಗಿ ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿದೆ ಎಂದು ಅವರು ಉಲ್ಲೇಖಿಸಿದ್ದಾರೆ. .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.