ನವದೆಹಲಿ: ಯುಕೆಯಲ್ಲಿ ಹೊಸ ಮಾದರಿಯ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಪತ್ತೆಯಾಗಿದ್ದು, ಜಗತ್ತನ್ನು ಮತ್ತೆ ಆತಂಕಕ್ಕೆ ದೂಡಿದೆ. ಈ ಹಿನ್ನಲೆಯಲ್ಲಿ ಭಾರತ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.
ಬ್ರಿಟನ್ನಲ್ಲಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಅಲ್ಲಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ರಾತ್ರಿ 11:59 ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತೀಯ ಸರ್ಕಾರ ನಿರ್ಧರಿಸಿದೆ. ಈ ಸ್ಥಗಿತ ಡಿಸೆಂಬರ್ 22 ರಾತ್ರಿ 11.59 ರಿಂದ ಜಾರಿಯಲ್ಲಿರಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ.
ಸ್ಥಗಿತ ಜಾರಿಗೆ ಬರುವವರೆಗೆ ಯುಕೆಯಿಂದ ಭಾರತಕ್ಕೆ ಬರುವ ಪ್ರಯಾಣಿಕರು ಕಡ್ಡಾಯ ಕೋವಿಡ್-19 ಪರೀಕ್ಷೆಗಳಿಗೆ ಒಳಪಡುತ್ತಾರೆ ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.