ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದ್ದು, 117 ತಾಲ್ಲೂಕೂಗಳ 3019 ಪಂಚಾಯತ್ಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಮತಗಟ್ಟೆಯತ್ತ ಧಾವಿಸಿ ಮತದಾನ ಮಾಡುತ್ತಿದ್ದಾರೆ. ಸಂಜೆ 5 ರ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಗ್ರಾಮ ಪಂಚಾಯತ್ ಇನ್ನೊಂದು ಹಂತದ ಚುನಾವಣೆ ಡಿ. 27 ರಂದು ನಡೆಯಲಿದೆ.
ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೂಕ್ತ ಎಚ್ಚರಿಕೆಯ ಜೊತೆಗೆ ಮತದಾನ ನಡೆಸಲು ಚುನಾವಣಾ ಆಯೋಗ ಎಲ್ಲಾ ತೆರನಾದ ವ್ಯವಸ್ಥೆ ಮಾಡಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಸಹ ವಹಿಸಲಾಗಿದೆ. ಅದರೊಂದಿಗೆ ಚುನಾವಣಾ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್, ಸಿಆರ್ಪಿಸಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.