ಕುಲ್ಗಾಮ್: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಟೋಂಗ್ಡೌನು ಎಂಬಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿಯಾದ ಸಂದರ್ಭದಲ್ಲಿ ಲಷ್ಕರ್-ಎ-ತೋಯ್ಬಾ (ಎಲ್ಇಟಿ) ಭಯೋತ್ಪಾದಕ ಗುಂಪಿಗೆ ಸೇರಿದ ಇಬ್ಬರು ಸ್ಥಳೀಯ ಭಯೋತ್ಪಾದಕರು ಶಸ್ತ್ರ ತ್ಯಾಗ ಮಾಡಿ ಶರಣಾಗತರಾಗಿದ್ದಾರೆ. ಕುಟುಂಬಗಳು ಮಾಡಿಕೊಂಡ ಮನವಿಗೆ ಕರಗಿ ಇವರುಗಳು ಈ ನಿರ್ಧಾರ ಮಾಡಿದರು ಎನ್ನಲಾಗಿದೆ.
ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಟೋಂಗ್ಡೌನುನಲ್ಲಿ ಎನ್ಕೌಂಟರ್ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರದೇಶವನ್ನು ಸುತ್ತುವರಿದು, ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಕಾರ್ಯಾಚರಣೆ ನಡೆಯುತ್ತಿರುವಾಗ, ಭಯೋತ್ಪಾದಕರ ಕುಟುಂಬಗಳು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗುವಂತೆ ಉಗ್ರರಿಗೆ ಮನವಿ ಮಾಡಿದರು. ಲಷ್ಕರ್-ಎ-ತೋಯ್ಬಾಕ್ಕೆ ಸೇರಿದ ಇಬ್ಬರು ಸ್ಥಳೀಯ ಭಯೋತ್ಪಾದಕರು ಪೊಲೀಸ್ ಮತ್ತು ಭದ್ರತಾ ಪಡೆಗಳ ಮುಂದೆ ಶರಣಾದರು.
ಅವರಿಂದ ಎರಡು ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
“ಕುಲ್ಗಾಮ್ ಟೋಂಗ್ಡೌನುನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಮುಖಾಮುಖಿಯ ಸಂದರ್ಭ, ಎಲ್ಇಟಿಯ ಇಬ್ಬರು ಸ್ಥಳೀಯ ಭಯೋತ್ಪಾದಕರು ಕುಟುಂಬಗಳ ಮನವಿಯ ಮೇರೆಗೆ ಶರಣಾದರು. ಎರಡು ಪಿಸ್ತೂಲ್ ಮತ್ತು ಮದ್ದುಗುಂಡುಗಳು ಸೇರಿದಂತೆ ಅಪರಾಧದ ವಸ್ತುಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.