ಶ್ರೀನಗರ: ಇತ್ತೀಚೆಗೆ ಮುಕ್ತಾಯಗೊಂಡ ಜಮ್ಮು ಮತ್ತು ಕಾಶ್ಮೀರ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದ 280 ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಸ್ಥಾನಗಳ ಸುಮಾರು 2,181 ಅಭ್ಯರ್ಥಿಗಳ ಭವಿಷ್ಯ ಇಂದು ಘೋಷಣೆಯಾಗಲಿದೆ. ಎಂಟು ಹಂತಗಳಲ್ಲಿ ನಡೆದ ಚುನಾವಣೆ ನವೆಂಬರ್ 28 ರಂದು ಪ್ರಾರಂಭವಾಗಿ ಡಿಸೆಂಬರ್ 19 ರಂದು ಕೊನೆಗೊಂಡಿತು.
ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ಹೊರಹೊಮ್ಮಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿದ್ದು, ಹೀಗಾಗಿ ಸಹಜವಾಗಿಯೇ ಫಲಿತಾಂಶದ ಮೇಲೆ ಎಲ್ಲರ ಗಮನ ನೆಟ್ಟಿದೆ. ಬಿಜೆಪಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿ ಇದೆ.
ಆರ್ಟಿಕಲ್ 370 ಅನ್ನು ಪುನಃಸ್ಥಾಪನೆ ಮಾಡಬೇಕು ಎಂದು ಜಿದ್ದಿಗೆ ಬಿದ್ದು ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್ (ಪಿಎಜಿಡಿ) ಬ್ಯಾನರ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಸೇರಿದಂತೆ ಏಳು ರಾಜಕೀಯ ಪಕ್ಷಗಳು ಮೈತ್ರಿಕೂಟಗಳು ಸ್ಪರ್ಧಿಸಿವೆ. ಕಾಂಗ್ರೆಸ್ ಆರಂಭದಲ್ಲಿ ಪಿಎಜಿಡಿಯ ಒಂದು ಭಾಗವಾಗಿತ್ತು ಆದರೆ ‘ಗುಪ್ಕರ್ ಗ್ಯಾಂಗ್’ ನೊಂದಿಗೆ ಒಡನಾಟ ಹೊಂದಿದ್ದಕ್ಕಾಗಿ ಬಿಜೆಪಿ ವಿರೋಧ ಪಕ್ಷವನ್ನು ಗುರಿಯಾಗಿಸಿಕೊಂಡ ಹಿನ್ನಲೆಯಲ್ಲಿ ಅದರಿಂದ ಅಂತರ ಕಾಯ್ದುಕೊಳ್ಳಲು ಪ್ರಾರಂಭಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.