ನವದೆಹಲಿ: ಐಪಿಎಲ್ನ ಮಾಜಿ ಮುಖ್ಯಸ್ಥ ಲಲಿತ್ ಮೋದಿಯವರಿಗೆ ನಾನು ಯಾವುದೇ ಸಹಾಯ ಮಾಡಿಲ್ಲ, ಬದಲಾಗಿ ಅವರ ಪತ್ನಿಗೆ ಮಾನವೀಯತೆಯ ಆಧಾರದಲ್ಲಿ ಸಹಾಯ ಮಾಡಿದ್ದೇನೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.
ಲಲಿತ್ ಮೋದಿಯವರ ಪತ್ನಿ ಮುಗ್ಧೆ, ಅವರು ಯಾವುದೇ ಕಾನೂನನ್ನು ಮುರಿದಿಲ್ಲ, ನನ್ನ ಜಾಗದಲ್ಲಿ ಇದ್ದಿದ್ದರೆ ಸೋನಿಯಾ ಗಾಂಧಿ ಏನು ಮಾಡುತ್ತಿದ್ದರು ಎಂದು ಕೇಳಲು ಬಯಸುತ್ತೇನೆ ಎಂದು ಸುಷ್ಮಾ ಪ್ರಶ್ನಿಸಿದ್ದಾರೆ.
ಲಲಿತ್ ಅವರಿಗೆ ವೀಸಾ ಕೊಡಿಸುವ ಸಲುವಾಗಿ ನಾನು ಬ್ರಿಟಿಷ್ ಸರ್ಕಾರವನ್ನು ಸಂಪರ್ಕಿಸಿದ್ದೇ ಎಂಬ ಪ್ರತಿಪಕ್ಷಗಳ ಆರೋಪ ನಿರಾಧಾರ. ಅಂತಹ ಮನವಿಯನ್ನು ನಾನು ಮಾಡಿಯೇ ಇಲ್ಲ ಎಂದು ಅವರು ಹೇಳಿದ್ದಾರೆ.
ಸುಷ್ಮಾ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದು, ಕಳೆದ ಕೆಲದಿನಗಳಿಂದ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.