ನವದೆಹಲಿ: ದೇಶದಲ್ಲಿ ಸುಲಲಿತ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಮುಂದಿನ ವರ್ಷ ಏಪ್ರಿಲ್ 15 ರೊಳಗೆ ಪ್ರಸ್ತಾವಿತ ಕೇಂದ್ರೀಕೃತ “ಇನ್ವೆಸ್ಟ್ಮೆಂಟ್ ಕ್ಲಿಯರೆನ್ಸ್ ಸೆಲ್” ಅನ್ನು ಪ್ರಾರಂಭಿಸಲು ಸರ್ಕಾರ ಸಜ್ಜಾಗಿದೆ ಎಂದು ಮೂಲಗಳು ವರದಿ ಮಾಡಿವೆ.
ಈ ಸೌಲಭ್ಯವು ಸಿಂಗಲ್ ವಿಂಡೋ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ, ಇದು ಉದ್ಯಮಿಗಳಿಗೆ ಒನ್-ಸ್ಟಾಪ್ ಡಿಜಿಟಲ್ ಪ್ಲಾಟ್ಫಾರ್ಮ್ ಆಗಿ ಅನುಕೂಲತೆ ಒದಗಿಸುವ ಗುರಿಯನ್ನು ಹೊಂದಿದೆ. ಕೇಂದ್ರ ಮತ್ತು ಆಯ್ದ ರಾಜ್ಯಗಳಲ್ಲಿ ಹಲವಾರು ಸಚಿವಾಲಯಗಳು ಮತ್ತು ಸರ್ಕಾರಗಳ ಇಲಾಖೆಗಳನ್ನು ಒಟ್ಟುಗೂಡಿಸುವ ಮೂಲಕ ವೇದಿಕೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಧಿಕಾರಿಗಳು, ಅವರ ಐಟಿ ಪೋರ್ಟಲ್ಗಳಿಗೆ ಅಡ್ಡಿಯಾಗದಂತೆ ನ್ಯಾಷನಲ್ ಪೋರ್ಟಲ್ನಲ್ಲಿ ವಿವಿಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳ ಅಸ್ತಿತ್ವದಲ್ಲಿರುವ ಕ್ಲಿಯರೆನ್ಸ್ ವ್ಯವಸ್ಥೆಯನ್ನು ಸಂಯೋಜಿಸುವ ನಿಟ್ಟಿನಲ್ಲಿ ಗಮನ ಹರಿಸಿದ್ದಾರೆ. ಇದು ಹೂಡಿಕೆದಾರರಿಗೆ ಒಂದೇ ಟಚ್ಪಾಯಿಂಟ್ ಖಚಿತಪಡಿಸುತ್ತದೆ.
ಇನ್ವೆಸ್ಟ್ಮೆಂಟ್ ಕ್ಲಿಯರೆನ್ಸ್ ಸೆಲ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ವರ್ಷದ ಕೇಂದ್ರ ಬಜೆಟ್ನಲ್ಲಿ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.