ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೇರೆ ಬೇರೆ ವೃಂದಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು, ದಂತ ವೈದ್ಯಾಧಿಕಾರಿಗಳಿಗೆ ಸಂಬಂಧಿಸಿದಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ.
2020 ರ ಸೆ. 1 ರಿಂದಲೇ ಅನ್ವಯವಾಗುವಂತೆ ಸರ್ಕಾರ ಆದೇಶವನ್ನು ಹೊರಡಿಸಿದೆ. ಕೊರೋನಾ ಸಂದರ್ಭದಲ್ಲಿ ವೈದ್ಯರುಗಳು ಸಲ್ಲಿಸಿದ ಸೇವೆಯ ಗೌರವಾರ್ಥ ಈ ಪರಿಷ್ಕರಣೆ ಮಾಡಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಈ ಹಿಂದೆ 2015 ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಣೆ ಮಾಡಲಾಗಿತ್ತು.
ವೈದ್ಯರುಗಳಿಗೆ ಅವರು ಅನುಭವದ ಆಧಾರದ ಮೇಲೆ ವೇತನ ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆಯೇ ವೇತನ ಪರಿಷ್ಕರಣೆ ಮಾಡುವಂತೆ ವೈದ್ಯರುಗಳು ಸರ್ಕಾರದ ಮುಂದೆ ಬೇಡಿಕೆ ಸಲ್ಲಿಸಿದ್ದು, ಈ ಬೇಡಿಕೆಯನ್ನು ಸರ್ಕಾರ ಈಡೇರಿಸುವ ಮೂಲಕ ಸರ್ಕಾರ ವೈದ್ಯರುಗಳಿಗೆ ಸಂತಸ ಉಂಟುಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ವೈದ್ಯರುಗಳೊಂದಿಗೆ ಸಭೆ ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.