ಬೆಂಗಳೂರು: ಬ್ರಿಟನ್ನಲ್ಲಿ ಪತ್ತೆಯಾಗಿರುವ ಹೊಸ ಮಾದರಿಯ ಕೊರೋನಾ ವೈರಸ್ ಭೀತಿ ಭಾರತದಲ್ಲಿಯೂ ಆವರಿಸಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಸಂಭಾವ್ಯ ಹರಡುವಿಕೆಯನ್ನು ತಡೆಯಲು ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.
ಈಗಾಗಲೇ ಬ್ರಿಟನ್ನಿಂದ ಭಾರತಕ್ಕೆ ಹಲವು ಮಂದಿ ಆಗಮಿಸಿದ್ದು, ಈ ಹಿನ್ನೆಲೆಯಲ್ಲಿ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಕಠಿಣ ಮಾರ್ಗಸೂಚಿ ಹೊರಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಬ್ರಿಟನ್ನಿಂದ ಬಂದವರಿಗೆ ಪ್ರತ್ಯೇಕ ಮಾರ್ಗಸೂಚಿ ಮತ್ತು ಪರೀಕ್ಷೆ ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.
ಈ ಹೊಸ ವೈರಸ್ ಕೊರೋನಾಗಿಂತಲೂ ಹೆಚ್ಚು ವೇಗವಾಗಿ ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮತ್ತು ಕೊರೋನಾ ಎರಡನೇ ಅಲೆಯೂ ಆರಂಭವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಯಾವುದೇ ರೀತಿಯ ಅನಾಹುತ ಸೃಷ್ಟಿಯಾಗದಿರಲಿ ಎಂಬ ಉದ್ದೇಶದಿಂದ ಈ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿರುವುದಾಗಿ ಸರ್ಕಾರದ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.