ಬೆಂಗಳೂರು: ನಗರದ ವಿದ್ಯಾನಗರದಲ್ಲಿರುವ ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ಕೇಂದ್ರವನ್ನು ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರ ಎಂದು ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ ಕಿರೆನ್ ರಿಜ್ಜು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಈ ಸಂಬಂಧ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಿದ್ದಾರೆ. ಕರ್ನಾಟಕದ ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ಕೇಂದ್ರ ಸೇರಿದಂತೆ ದೇಶದ 8 ರಾಜ್ಯಗಳ ಕ್ರೀಡಾ ಕೇಂದ್ರಗಳಿಗೆ ಈ ಮಾನ್ಯತೆ ನೀಡಲಾಯಿತು. ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ಕೇಂದ್ರದಲ್ಲಿ ಅಥ್ಲೆಟಿಕ್ಸ್, ಈಜು ಮತ್ತು ಶೂಟಿಂಗ್ ತರಬೇತಿ ನೀಡಲಾಗುತ್ತದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಈ ಕೇಂದ್ರದಲ್ಲಿ ಕ್ರೀಡಾ ವಸತಿ ಶಾಲೆ (ಫುಟ್ಬಾಲ್, ಅಥ್ಲೆಟಿಕ್ಸ್, ಬಾಸ್ಕೆಟ್ ಬಾಲ್), 400 ಮೀ. ಅಂತರರಾಷ್ಟ್ರೀಯ ಮಟ್ಟದ ಸಿಂಥೆಟಿಕ್ ಟ್ರ್ಯಾಕ್, ಈಜುಕೊಳ, ಒಳಾಂಗಣ ಕ್ರೀಡಾಂಗಣ, ಆಯುರ್ವೇದಿಕ್ ಆರೋಗ್ಯ ಕೇಂದ್ರ, ಸಿಂಥೆಟಿಕ್ ಬಾಸ್ಕೆಟ್ ಬಾಲ್, ಸಿಂಥೆಟಿಕ್ ಫುಟ್ಬಾಲ್ ಅಂಗಣ, ಅಂತರರಾಷ್ಟ್ರೀಯ ಗುಣಮಟ್ಟದ ಜಿಮ್, ವಸತಿ ವ್ಯವಸ್ಥೆ ಸೇರಿದಂತೆ ಮತ್ತಿತರ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ರಾಜ್ಯದಲ್ಲಿ ಕ್ರೀಡಾಳುಗಳಿಗೆ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈ ಕೇಂದ್ರಕ್ಕೆ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರ ಎಂಬ ಮಾನ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಜೊತೆಗೆ ಒಲಿಂಪಿಕ್ ಗೆ ತರಬೇತಿ ನೀಡಲು 32 ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.