ಬೆಂಗಳೂರು: ರಾಜ್ಯದ ಎಪಿಎಂಸಿಗಳಲ್ಲಿ ಸೆಸ್ ಸಂಗ್ರಹ ಕಡಿಮೆಯಾಗುವುದರಿಂದ ಉಂಟಾಗುವ ನಷ್ಟವನ್ನು ಸರ್ಕಾರವೇ ಭರಿಸುವುದು ಎಂದು ಸಹಕಾರಿ ಸಚಿವ ಎಸ್. ಟಿ ಸೋಮಶೇಖರ್ ತಿಳಿಸಿದ್ದಾರೆ.
ಎಪಿಎಂಸಿಯನ್ನು ಮುಚ್ಚುವ ಯಾವುದೇ ಉದ್ದೇಶವನ್ನು ಸರ್ಕಾರ ಹೊಂದಿಲ್ಲ. ಸೆಸ್ ಸಂಗ್ರಹ ಕಡಿಮೆಯಾಗುವುದರಿಂದ ಆ ನಷ್ಟವನ್ನು ಭರಿಸುವ ಹೊಣೆಯನ್ನು ಸರ್ಕಾರ ಹೊತ್ತುಕೊಳ್ಳಲಿದೆ. ಈ ನಷ್ಟವನ್ನು ಭರಿಸುವ ದೃಷ್ಟಿಯಿಂದಲೇ ಸೆಸ್ ಹೆಚ್ಚಳದ ನಿರ್ಧಾರವನ್ನು ಮುಖ್ಯಮಂತ್ರಿಗಳು ಪ್ರಕಟಿಸಿರಬಹುದು ಎಂದು ಸಚಿವರು ತಿಳಿಸಿದ್ದಾರೆ. ಸೆಸ್ 35 ಪೈಸೆ ಸಂಗ್ರಹದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೂ ನಷ್ಟವಾಗಲಿದ್ದು, ಈ ಸಂಬಂಧ ಕ್ಯಾಬಿನೆಟ್ನಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಎಪಿಎಂಸಿಗೆ ಸಂಬಂಧಿಸಿದಂತೆ ಸಿಬಂದಿಗಳ ವೇತನ ಹಾಗೂ ನಿರ್ವಹಣೆಯ ವಿಚಾರಕ್ಕೆ ಸಂಬಂಧಿಸಿದಂತೆ 120 ಕೋಟಿ ರೂ. ಅಗತ್ಯವಿದೆ. ಸೆಸ್ ನಿಂದ 90 ಕೋಟಿ ಗಳಷ್ಟು ಮಾತ್ರವೇ ಸಂಗ್ರಹವಾಗುತ್ತಿದೆ. ಉಳಿದ 500 ಕೋಟಿಯನ್ನು ಸರ್ಕಾರ ಭರಿಸಲು ಸಿದ್ಧವಿದೆ ಎಂದು ಸಚಿವರು ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಎಪಿಎಂಸಿ ಮುಚ್ಚುವುದಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.