ಬೆಂಗಳೂರು: ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆಯಲ್ಲಿ 2021 ರ ಜನವರಿ 15 ರ ಒಳಗಾಗಿ ಮೂರು ತಿಂಗಳ ಆಹಾರ ಧಾನ್ಯಗಳನ್ನು ವಿತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ಅಭಯ ಶ್ರೀನಿವಾಸ್ ಓಕಾ ಮತ್ತು ಅರವಿಂದ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠಕ್ಕೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ಅಂಗೀಕಾರ ಮಾಡಿತು.
ಡಿಸೆಂಬರ್ 2020 ರಲ್ಲಿ ಹೊರಡಿಸಲಾಗಿದ್ದ ಕೊರಿಜೆನ್ಕಮ್ ಆದೇಶದಲ್ಲಿ ನಿರ್ದಿಷ್ಟಪಡಿಸಿದ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದೆ. 2020 ರ ಡಿಸೆಂಬರ್ ಅಂತ್ಯದಲ್ಲಿ ಆಹಾರ ವಿತರಣೆ ಪ್ರಕ್ರಿಯೆ ಸಂಪೂರ್ಣವಾಗಬೇಕಿತ್ತು. ಆದರೆ ಆಹಾರ ಪದಾರ್ಥಗಳ ಅಂತಿಮಗೊಳಿಸುವಿಕೆಯ ಮತ್ತು ಪ್ರಮಾಣೀಕರಣ ಪ್ರಕ್ರಿಯೆ ವಿಳಂಬವಾದ್ದರಿಂದ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ 2021 ರ ಜನವರಿ 15 ರೊಳಗಾಗಿ ಈ ಪ್ರಕ್ರಿಯೆ ಸಂಪೂರ್ಣಗೊಳಿಸುವುದಾಗಿ ಸರ್ಕಾರ ಕೋರ್ಟ್ಗೆ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.