ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದಲ್ಲಿ 9 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ.
ಕೊರೋನಾ ಸೋಂಕಿನ ರೂಪಾಂತರ ಹಾವಳಿಯ ಭೀತಿ ಹೆಚ್ಚಿರುವುದರಿಂದ ಇಂದಿನಿಂದ ಮುಂದಿನ 9 ದಿನಗಳ ಕಾಲ ರಾತ್ರಿ 10 ರಿಂದ ಬೆಳಗ್ಗೆ 6 ರ ವರೆಗೆ ರಾತ್ರಿ ವೇಳೆಯಲ್ಲಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಮಯದಲ್ಲಿ ವ್ಯಾಪಾರ ವಹಿವಾಟುಗಳನ್ನು ನಡೆಸುವಂತಿಲ್ಲ ಎಂದು ಮುಖ್ಯಮಂತ್ರಿ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಭೀತಿ ಮತ್ತು ಬ್ರಿಟನ್ನಿಂದ ರಾಜ್ಯಕ್ಕೆ ಹಿಂದಿರುಗಿದವರಲ್ಲಿಯೂ ಕೊರೋನಾ ರೂಪಾಂತರ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.