ಲಕ್ನೋ: ಹೊಸದಾಗಿ ರೂಪಿಸಲಾದ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾನೂನು ಜಾರಿಯಾದ ಬಳಿಕ, ಮಹಿಳೆಯರನ್ನು ಮತಾಂತರಗೊಳಿಸಲು ಪ್ರಯತ್ನಿಸಿದ ಅನೇಕರನ್ನು ಬಂಧನಕ್ಕೆ ಒಳಪಡಿಸಲಾಗಿದೆ.
ಇಸ್ಲಾಂಗೆ ಮತಾಂತರವಾಗುವಂತೆ ಪೀಡಿಸಿದ 14 ಮಂದಿಯನ್ನು ಮತ್ತು ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸುವಂತೆ ಜನರನ್ನು ಮನವೊಲಿಸಲು ಪ್ರಯತ್ನಿಸಿದ ಮೂವರನ್ನು ಬಂಧಿಸಿದ್ದಾರೆ.
ಇತಾಹ್ನಲ್ಲಿ, 21 ವರ್ಷದ ಬಾಲಕಿಯನ್ನು ಬಲವಂತವಾಗಿ ಮತಾಂತರ ಮಾಡಿ ನಂತರ ಮದುವೆಯಾದ ಆರೋಪದ ಮೇಲೆ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ.
ಅಜಮ್ಗಢದಲ್ಲಿ, ಇತರ ಮೂರು ಜನರನ್ನು ಮತಾಂತರ ಮಾಡಿದ್ದಕ್ಕಾಗಿ ಬಂಧಿಸಲಾಗಿದೆ.
ಮಹಿಳೆಯ ತಂದೆ, ಉದ್ಯಮಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಹೊಸ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಇತಾಹದ ಜಲೇಶರ್ನಲ್ಲಿ 8 ಮಂದಿಯನ್ನು ಗುರುವಾರ ಬಂಧಿಸಲಾಗಿದೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ, “ಮಂಗಳವಾರ ಎಂಟು ಮಂದಿ ಸೇರಿದಂತೆ 17 ಜನರನ್ನು ಈವರೆಗೆ ಬಂಧಿಸಲಾಗಿದೆ. ಮೂರು ಪೊಲೀಸ್ ತಂಡಗಳು ಮತಾಂತರಗೊಂಡ ಮಹಿಳೆಯೊಬ್ಬಳನ್ನು ಹುಡುಕಲು ಪ್ರಯತ್ನಿಸುತ್ತಿವೆ ಮತ್ತು ಪರಾರಿಯಾದ ಆರೋಪಿಗಳನ್ನು ಬಂಧಿಸಲಿವೆ” ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.