ತಿರುವನಂತಪುರ: ಸಿಸ್ಟರ್ ಅಭಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾದರ್ ಥಾಮಸ್ ಕೊಟ್ಟೂರು ಮತ್ತು ಸಿಸ್ಟರ್ ಸೆಫೆ ಅವರನ್ನು ಅಪರಾಧಿಗಳು ಎಂದು ತಿರುವನಂತಪುರ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೇ, ಇವರಿಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಕೊಲೆ ಪ್ರಕರಣ ದಾಖಲಾದ 28 ವರ್ಷ 9 ತಿಂಗಳ ಬಳಿಕ ಈ ತೀರ್ಪು ಪ್ರಕಟವಾಗಿದೆ. ಕೊಟ್ಟಾಯಂನ ಚರ್ಚ್ನಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳನ್ನು ಸಿಸ್ಟರ್ ಅಭಯಾ ನೋಡಿದ್ದರು. ಸಾಕ್ಷ್ಯ ನಾಶ ಮಾಡುವ ನಿಟ್ಟಿನಲ್ಲಿ ಅಭಯಾ ಅವರನ್ನು ಕೊಡಲಿಯಿಂದ ಕಡಿದು ಹತ್ಯೆ ಮಾಡಲಾಗಿತ್ತು. 1992 ರಲ್ಲಿ ಕೊಟ್ಟಾಯಂನ ಕಾನ್ವೆಂಟ್ ಒಂದರಲ್ಲಿ ಅಭಯಾ ಮೃತದೇಹ ಪತ್ತೆಯಾಗಿತ್ತು.
ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಅಭಯಾ ಅವರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ದೊರಕಿತ್ತು. ಆದರೆ ಈ ಪ್ರಕರಣವನ್ನು ಮುಚ್ಚಿ ಹಾಕಲು ಸ್ಥಳೀಯ ಅಧಿಕಾರಿಗಳು ಪ್ರಯತ್ನ ನಡೆಸಿದ್ದರು. ಆದರೆ ಪೋಷಕರ ಎಡೆಬಿಡದ ಪ್ರಯತ್ನದ ಫಲವಾಗಿ 2008 ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆತಿದ್ದು, ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.