ಬೆಂಗಳೂರು: ರಾಜ್ಯ ಸರ್ಕಾರ ವಿಶಿಷ್ಟ ರೈತಸ್ನೇಹಿ ಯೋಜನೆಗೆ ಚಾಲನೆ ನೀಡಲಿದೆ. ರೈತರಿಗೆ ತಂತ್ರಜ್ಞಾನ ಆಧಾರಿತ ಸಾಲ ವಿತರಣೆ ವ್ಯವಸ್ಥೆಯ ಮೂಲಕ ಸರ್ಕಾರ ರೈತರಿಗೆ ಅನುಕೂಲ ಮಾಡಿ ಕೊಡಲು ಮುಂದಾಗಿದೆ. ಫಾರ್ಮರ್ ರಿಜಿಸ್ಟ್ರೇಷನ್ ಆಂಡ್ ಯುನಿಫೈಡ್ ಬೆನಿಫಿಶರಿ ಇನ್ಫಾರ್ಮೇಶನ್ ಸಿಸ್ಟಂ (ಫ್ರುಟ್ಸ್) ಯೋಜನೆಗೆ ಸರ್ಕಾರ ಮುಂದಾಗಿದೆ.
ಕೆನರಾ ಬ್ಯಾಂಕ್ನ ಆಯ್ದ ಎರಡು ಶಾಖೆಗಳ ಮೂಲಕ ರೈತರಿಗೆ ಕೃಷಿ ಸಾಲ ವಿತರಣೆಯನ್ನು ಸರ್ಕಾರ ಮಾಡಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸರ್ಕಾರದ ಫ್ರುಟ್ಸ್ ಡೇಟಾ ಮಾಹಿತಿಯನ್ನು ಸಂಯೋಜಿಸುವ ಮೂಲಕ ಬ್ಯಾಂಕ್ಗಳು ಸಾಲ ವಿತರಣೆ ಮಾಡಲಿವೆ. ಈ ಯೋಜನೆ ರೈತರಿಗೆ ಸಾಲ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಲಿದೆ. ಹಾಗೆಯೇ ಒಂದು ಭೂಮಿಯ ಮೇಲೆ ಹಲವು ಬಾರಿ ಸಾಲ ಪಡೆದುಕೊಳ್ಳುವುದಕ್ಕೆ ಪೂರಕವಾಗುವಂತೆ ಈ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ.
ಈ ಸೌಲಭ್ಯವನ್ನು ಕೆನರಾ ಬ್ಯಾಂಕ್ನ ನೆಲಮಂಗಲ ಮತ್ತು ತಾವರೆಕೆರೆ ಶಾಖೆಗಳಲ್ಲಿ ಈ ವ್ಯವಸ್ಥೆಯನ್ನು ಆರಂಭ ಮಾಡಲಾಗಿದೆ. ಈ ಯೋಜನೆಯಿಂದ ರೈತರು ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋಗಿ ದಾಖಲೆ ಪತ್ರಗಳನ್ನು ಪಡೆದುಕೊಳ್ಳುವ ಸಮಸ್ಯೆಯನ್ನು ಸಹ ಫ್ರುಟ್ಸ್ ನಿವಾರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.