ಬೆಂಗಳೂರು: ಯಲಹಂಕದ ರೈಲ್ ವೀಲ್ ಫ್ಯಾಕ್ಟರಿ ತನ್ನಲ್ಲಿ ತಯಾರಾಗುವ ಉತ್ಪನ್ನಗಳ ಬೆಲೆಯನ್ನು ಕಡಿತಗೊಳಿಸಿ ಸ್ಪರ್ಧಾತ್ಮಕ ದರದಲ್ಲಿ ಮಾರಾಟ ಮಾಡಲು ಮುಂದಾಗಿದೆ. ಆ ಮೂಲಕ ಇತರ ಕಂಪೆನಿಗಳಿಗಿಂತ ಕಡಿಮೆ ದರಕ್ಕೆ ಉತ್ಪನ್ನಗಳ ಮಾರಾಟಕ್ಕೆ ಮುಂದಾಗಿದೆ.
ಈ ಸಂಬಂಧ ಸಂಸ್ಥೆಯ ಎಂಡಿ ರಾಜೀವ್ ಕುಮಾರ್ ವ್ಯಾಸ್ ಮಾತನಾಡಿದ್ದು, ರೈಲು ಚಕ್ರಗಳ ಬೆಲೆಯನ್ನು 10 ಸಾವಿರ ಎಂಎಂ ಚಕ್ರಗಳಿಗೆ 22% ಮತ್ತು 840 ಎಂಎಂ ಗೆ 36% ಗಳಷ್ಟು ಕಡಿತಗೊಳಿಸಲು ಮುಂದಾಗಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಇದಕ್ಕೆ ಬಳಕೆ ಮಾಡುವ ಕಚ್ಚಾ ವಸ್ತುಗಳ ಮೇಲೆ 10%- 12% ಜಿಎಸ್ಟಿ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಆರಂಭಿಸಿರುವುದಾಗಿ ತಿಳಿಸಿದ್ದಾರೆ. ಚೀನಾದಿಂದ ಆಮದು ಮಾಡಿಕೊಳ್ಳಲು ಬಳಸುವ ಹಣಕ್ಕಿಂತ ಕಡಿಮೆಗೆ ಸಂಸ್ಥೆ ಮಾರಾಟ ಮೌಲ್ಯವನ್ನು ನಿಗದಿ ಮಾಡಿರುವುದಾಗಿ ತಿಳಿಸಿದ್ದಾರೆ.
2019 ರ ಮೇ 9 ರ ಸಂದರ್ಭದಲ್ಲಿ ವೀಲ್ ಸೆಟ್ ಅನ್ನು 1.68 ಲಕ್ಷ ರೂ. ಗಳಿಗೆ ಮಾರಾಟ ಮಾಡಲಾಗುತ್ತಿದೆ. ಸದ್ಯ ಈ ದರವನ್ನು ನಿರಂತರ ಪ್ರಯತ್ನದ ಫಲವಾಗಿ ಮತ್ತಷ್ಟು ಕಡಿತ ಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.