ಬೆಂಗಳೂರು: ಬ್ರಿಟನ್ನಲ್ಲಿ ಹೊಸ ಮಾದರಿಯ ಕೊರೋನಾವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಬ್ರಿಟನ್ನಿಂದ ಭಾರತಕ್ಕೆ ಆಗಮಿಸುವವರೆಲ್ಲರಿಗೂ ವಿಮಾನ ನಿಲ್ದಾಣದಲ್ಲಿಯೇ ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಬೇಕಿದೆ. ವರದಿಯಲ್ಲಿ ನೆಗೆಟಿವ್ ಬಂದರೂ 14 ದಿನಗಳ ಕ್ವಾರಂಟೈನ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಈ ಮಾರ್ಗಸೂಚಿಯಲ್ಲಿ ಸರ್ಕಾರ ತಿಳಿಸಿದೆ.
ಲಂಡನ್ನಿಂದ ನೇರವಾಗಿ ಅಥವಾ ಲಂಡನ್ನಿಂದ ಬೇರೆಡೆಗೆ ತೆರಳಿ ಭಾರತಕ್ಕೆ ಆಗಮಿಸುವವರಿಗೆ ಈ ನಿಯಮಗಳು ಅನ್ವಯವಾಗಲಿದೆ. ಸೋಂಕು ದೃಢಪಟ್ಟರೆ ನಿಗದಿಪಡಿಸಿದ ಆಸ್ಪತ್ರೆಯಲ್ಲಿ ಐಸೋಲೇಶನ್ಗೆ ಒಳಪಡಬೇಕು. ಪ್ರಯಾಣದ 72 ಗಂಟೆಗಳ ಮೊದಲು ಪ್ರಯಾಣಿಕರು ಸ್ವಯಂ ಘೋಷಣೆ ಫಾರ್ಮ್ ಅನ್ನು ತುಂಬಬೇಕು.
ಹೋಮ್ ಕ್ವಾರಂಟೈನ್ನಿಂದ ವಿನಾಯ್ತಿ ಪಡೆಯುವುದಕ್ಕೆ ವಿಮಾನ ಪ್ರಯಾಣ ಮಾಡುವುದಕ್ಕೂ 72 ಗಂಟೆಗಳ ಮುನ್ನ ನಡೆಸಿರುವ ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ನೀಡಬೇಕಾಗುತ್ತದೆ. ಆದರೆ ಎಲ್ಲಾ ಪ್ರಯಾಣಿಕರೂ ಆರೋಗ್ಯದ ಬಗ್ಗೆ ಸ್ವಯಂ ನಿಗಾವಹಿಸಬೇಕಾಗುತ್ತದೆ ಹಾಗೂ ಕೋವಿಡ್-19 ಮಾದರಿಯ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯಕೀಯ ಸಲಹೆ ಪಡೆಯಬೇಕಾಗುತ್ತದೆ.
ಜೊತೆಗೆ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ 14 ದಿನಗಳ ಹೋಂ ಕ್ವಾರಂಟೈನ್, ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಪ್ರಮಾಣಪತ್ರ ಸಹ ಅಗತ್ಯ ಎಂದು ಈ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಔದ್ಯೋಗಿಕ ನೆಲೆಯಲ್ಲಿ ಆಗಮಿಸುವವರು, ಪರೀಕ್ಷೆ ಸೇರಿದಂತೆ ಇನ್ನಿತರ ಅಗತ್ಯ ವಿಚಾರಗಳಿಗೆ ಆಗಮಿಸುವವರು 72 ಗಂಟೆಗಳ ಮುನ್ನ ಪಡೆದ ಕೊರೋನಾ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯ.
ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್, ಪಲ್ಸ್ ಆಕ್ಸಿಮೀಟರ್ ಪರಿಶೀಲನೆ, ಆರೋಗ್ಯ ಸೇತು ಆಪ್, ಕ್ವಾರಂಟೈನ್ ಆ್ಯಪ್, ಆಪ್ತಮಿತ್ರ ಆ್ಯಪ್ಗಳ ಪರಿಶೀಲನೆ ನಡೆಸಲಾಗುತ್ತದೆ. ಡಿ.31, 2020 ರ 23:59 ಗಂಟೆಗಳ ವರೆಗೆ ಬ್ರಿಟನ್ ನಿಂದ ಭಾರತಕ್ಕೆ, ಭಾರತದಿಂದ ಬ್ರಿಟನ್ ಗೆ ಪ್ರಯಾಣಿಸುವ ಎಲ್ಲಾ ವಿಮಾನಗಳಿಗೂ ನಿರ್ಬಂಧ ವಿಧಿಸಲಾಗಿದೆ. ವಿದೇಶದಿಂದ ಆಗಮಿಸುವ ಪ್ರತಿಯೊಬ್ಬರಿಗೂ ಕೋವಿಡ್ ಸೋಂಕು ಪರೀಕ್ಷೆ ಕಡ್ಡಾಯವಾಗಿದ್ದು, ಎಲ್ಲೆ ಪ್ರಯಾಣಿಸಲಿ, ಈ ಕುರಿತ ಪ್ರಮಾಣ ಪತ್ರವನ್ನು ಹೊಂದುವುದು ಅಗತ್ಯವಾಗಿದೆ. ರಾಜ್ಯಕ್ಕೆ ಆಗಮಿಸುವ 72 ಗಂಟೆಗಳಿಗೆ ಮುನ್ನ ಆರ್ಟಿ ಪಿಸಿಆರ್ ಪರೀಕ್ಷೆ ಮಾಡಿಸಬೇಕು ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.