ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ 9 ಕೋಟಿ ರೈತರಿಗೆ 18 ಸಾವಿರ ಕೋಟಿ ರೂಪಾಯಿಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ಆರು ವಿವಿಧ ರಾಜ್ಯಗಳ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.
ರೈತರು ಪಿಎಂ-ಕಿಸಾನ್ ಬಗ್ಗೆ ತಮ್ಮ ಅನುಭವಗಳನ್ನು ಮತ್ತು ರೈತರ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡ ಇತರ ಹಲವಾರು ಉಪಕ್ರಮಗಳ ಬಗ್ಗೆ ಅನಿಸಿಕೆ ಹಂಚಿಕೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಸಚಿವರು ಉಪಸ್ಥಿತರಿರಲಿದ್ದಾರೆ.
ಪಿಎಂ-ಕಿಸಾನ್ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ರೈತರಿಗೆ ವರ್ಷಕ್ಕೆ 6,000 ರೂಗಳನ್ನು ತಲಾ 2,000 ರೂಗಳಂತೆ ಮೂರು ಕಂತುಗಳಲ್ಲಿ ಪಾವತಿ ಮಾಡಲಾಗುತ್ತದೆ.
ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.
ಡಿಸೆಂಬರ್ 25 ರಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಉತ್ತಮ ಆಡಳಿತ ದಿನವಾಗಿ ಸರ್ಕಾರ ಆಚರಿಸುತ್ತದೆ. ಈ ದಿನ ನಾಳೆ ರೈತರಿಗೆ ಮೋದಿ ಆರ್ಥಿಕ ನೆರವು ವರ್ಗಾವಣೆ ಮಾಡುತ್ತಿರುವುದು ವಿಶೇಷ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.