ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ಗಂಟೆ ಸೇವೆ ಒದಗಿಸಲು ಅನುಕೂಲವಾಗುವಂತೆ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುವುದು. ವೈದ್ಯಕೀಯ ಸಿಬ್ಬಂದಿಗಳನ್ನು ಒದಗಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ಆರೋಗ್ಯ ಇಲಾಖೆಯ ಮಾದರಿ ಆರೋಗ್ಯ ಕೇಂದ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವ ಮತ್ತು ಎಲ್ಲಾ ರೀತಿಯ ಸೇವೆಗಳನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಎಲ್ಲಾ ಸೇವೆಗಳು ಒಂದೇ ಆಸ್ಪತ್ರೆಯಲ್ಲಿ ಸಿಗುವಂತಿದ್ದರೆ, ಜಿಲ್ಲಾಸ್ಪತ್ರೆಗಳಿಗೆ ಅಲೆಯುವ ಸ್ಥಿತಿ ಬಡವರಿಗೆ ತಪ್ಪುತ್ತದೆ ಎಂದು ಅವರು ತಿಳಿಸಿದ್ದಾರೆ.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಕಲ ಆರೋಗ್ಯ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಪೂರಕ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಹೆಚ್ಚು ಅನುಕೂಲಗಳನ್ನು ಒದಗಿಸಿಕೊಡುವುದು ಸರ್ಕಾರದ ಧ್ಯೇಯವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.