ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೆಯಿ ಅವರ 96 ನೇ ಜನ್ಮ ದಿನಾಚರಣೆಯನ್ನು ದೇಶವ್ಯಾಪಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮಹಾನ್ ಚೇತನವನ್ನು ಸ್ಮರಿಸಿದ್ದಾರೆ.
ಇಂದು ಮೋದಿ ಸಂಸತ್ತಿನಲ್ಲಿ ‘ಅಟಲ್ ಬಿಹಾರಿ ವಾಜಪೇಯಿ’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಉತ್ತಮ ಆಡಳಿತ ದಿನವೆಂದು ಆಚರಿಸಲಾಗುವ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಅಟಲ್ ಅವರ ಸಮಾಧಿ ʼಸದೈವ ಅಟಲ್ʼಗೆ ತೆರಳಿ ಗೌರವ ನಮನ ಸಲ್ಲಿಸಿದ್ದಾರೆ.
ಅಟಲ್ ಅವರ ಜನ್ಮ ದಿನಾಚರಣೆಯಾದ ಇಂದು ಪಿಎಂ ಮೋದಿ ಅವರು ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. 9 ಕೋಟಿ ರೈತರಿಗೆ 18,000 ಕೋಟಿ ರೂಪಾಯಿ ಬಿಡುಗಡೆ ಮಾಡಲಿದ್ದಾರೆ.
“ಮಾಜಿ ಪ್ರಧಾನಿ ಪೂಜ್ಯ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯಂದು ನಮನಗಳು. ದೂರದೃಷ್ಟಿಯ ನಾಯಕತ್ವದ ಮೂಲಕ ಅವರು ದೇಶವನ್ನು ಅಭೂತಪೂರ್ವ ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ದರು. ಬಲಿಷ್ಠ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳು ಯಾವಾಗಲೂ ನೆನಪಿನಲ್ಲಿ ಉಳಿಯುತ್ತವೆ” ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
पूर्व प्रधानमंत्री आदरणीय अटल बिहारी वाजपेयी जी को उनकी जन्म-जयंती पर शत-शत नमन। अपने दूरदर्शी नेतृत्व में उन्होंने देश को विकास की अभूतपूर्व ऊंचाइयों पर पहुंचाया। एक सशक्त और समृद्ध भारत के निर्माण के लिए उनके प्रयासों को सदैव स्मरण किया जाएगा।
— Narendra Modi (@narendramodi) December 25, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.