ನವದೆಹಲಿ: ಜನವರಿ 1ರಿಂದ ದೇಶದ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯಗೊಳಿಸಲಾಗುತ್ತಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ.
ವರ್ಚುವಲ್ ಕಾರ್ಯವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, “2021 ರ ಜನವರಿ 1 ರಿಂದ ಫಾಸ್ಟ್ಟ್ಯಾಗ್ ಅನ್ನು ಜಾರಿಗೊಳಿಸಲಾಗುತ್ತದೆ. ಪ್ರಯಾಣಿಕರಿಗೆ ಇದು ಉಪಯುಕ್ತವಾಗಿದ್ದು, ನಗದು ಪಾವತಿಗಾಗಿ ಟೋಲ್ ಪ್ಲಾಜಾಗಳಲ್ಲಿ ನಿಲ್ಲುವ ಅಗತ್ಯವಿಲ್ಲ. ಇದು ಸಮಯ ಮತ್ತು ಇಂಧನವನ್ನು ಉಳಿಸುತ್ತದೆ” ಎಂದಿದ್ದಾರೆ.
ಪ್ರಾರಂಭವಾದ 2016ರಲ್ಲಿ ನಾಲ್ಕು ಬ್ಯಾಂಕುಗಳು ಒಟ್ಟಾಗಿ ಸುಮಾರು ಒಂದು ಲಕ್ಷ ಫಾಸ್ಟ್ಟ್ಯಾಗ್ಗಳನ್ನು ನೀಡಿವೆ. 2018 ರಲ್ಲಿ 34 ಲಕ್ಷಕ್ಕೂ ಹೆಚ್ಚು ಫಾಸ್ಟ್ಟ್ಯಾಗ್ಗಳನ್ನು ನೀಡಲಾಗಿದೆ. ಸಚಿವಾಲಯವು ಕಳೆದ ತಿಂಗಳು ಅಧಿಸೂಚನೆ ಹೊರಡಿಸಿದ್ದು, 2021 ರ ಜನವರಿ 1 ರೊಳಗೆ ಫಾಸ್ಟ್ಟ್ಯಾಗ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಅನೇಕ ವಿಧಾನಗಳಲ್ಲಿ ಫಾಸ್ಟ್ಟ್ಯಾಗ್ ಲಭ್ಯತೆಯನ್ನು ಖಾತರಿಪಡಿಸಲು ಸಚಿವಾಲಯ ಕ್ರಮಗಳನ್ನು ತೆಗೆದುಕೊಂಡಿದೆ. ಆನ್ಲೈನ್ ಕಾರ್ಯವಿಧಾನಗಳ ಮೂಲಕವೂ ಲಭ್ಯವಾಗುವಂತೆ ಮಾಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.