ಬೆಂಗಳೂರು: ದೇಶದ್ರೋಹದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ ಪಿಎಫ್ಐನ ಮತ್ತಷ್ಟು ಗುಟ್ಟುಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಬಹಿರಂಗಪಡಿಸುತ್ತಿದೆ. ಕಳೆದ ಕೆಲವು ವರ್ಷಗಳಿಂದ ಈ ಸಂಘಟನೆಯ ಬ್ಯಾಂಕ್ ಖಾತೆಗಳಿಗೆ 100 ಕೋಟಿ ರೂಪಾಯಿಗೂ ಅಧಿಕ ಹಣ ಜಮೆ ಆಗಿರುವುದು ಸ್ಪಷ್ಟವಾಗಿದೆ.
2014ರ ಬಳಿಕ ಹಣ ವರ್ಗಾವಣೆ ಗಣನೀಯವಾಗಿ ಹೆಚ್ಚಳವಾಗಿದೆ. ಬಹುಪಾಲು ನಗದು ಮೂಲಕವೇ ಜಮೆ ಆಗಿದೆ. 2019ರ ಡಿಸೆಂಬರ್ ನಿಂದ 2020ರ ಫೆಬ್ರವರಿ ವರೆಗೆ ಸಿಎಎ ಪ್ರತಿಭಟನೆಗೆ ಈ ಹಣ ಬಳಕೆ ಮಾಡಲಾಗಿದೆ ಎಂದು ಇಡಿ ಹೇಳಿದೆ.
ಪಿಎಫ್ಐ ಖಾತೆಗೆ ಜಮೆ ಆಗಿರುವ ಹಣದ ಮೂಲ ಯಾವುದು? ಅದನ್ನು ಯಾವೆಲ್ಲಾ ಉದ್ದೇಶಕ್ಕಾಗಿ ಬಳಕೆ ಮಾಡಲಾಗುತ್ತಿದೆ ಎಂಬಿತ್ಯಾದಿ ಅಂಶಗಳ ಬಗ್ಗೆ ತನಿಖೆ ನಡೆಯುತ್ತಿದೆ.
ಇಷ್ಟು ಮಾತ್ರವಲ್ಲದೆ, ಬೆಂಗಳೂರು ಗಲಭೆಯಲ್ಲೂ ಪಿಎಫ್ಐ ಭಾಗಿಯಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಕೂಡ ತನಿಖೆಯನ್ನು ನಡೆಸಲಾಗುತ್ತಿದೆ.
ಪಿಎಫ್ಐ ವಿದ್ಯಾರ್ಥಿ ಘಟಕದ ನಾಯಕ ಕೆ.ಎ ರವೂಫ್ ಕಸ್ಟಡಿಯನ್ನು ಇನ್ನಷ್ಟು ದಿನ ವಿಸ್ತರಣೆ ಮಾಡುವಂತೆ ಕೋರಿ ಇಡಿ ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.