ಚೆನ್ನೈ: ನಟ, ರಾಜಕಾರಣಿ ಕಮಲ್ ಹಾಸನ್ ಪಕ್ಷಕ್ಕೆ 2021 ರ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನವೇ ಹಿನ್ನಡೆಯಾಗಿದೆ.
ಮುನ್ನ ಮಕ್ಕಳ್ ನೀಧಿ ಮಯ್ಯಂ ಎಂಬ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಆಗಿದ್ದು, ಅವರ ಪಕ್ಷದ ಪ್ರಧಾನ ಕಾರ್ಯದರ್ಶಿ ಎ ಅರುಣಾಚಲಂ ಅವರು ಬಿಜೆಪಿಗೆ ಬಂದಿದ್ದಾರೆ. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಮಲ್ ಹಾಸನ್ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅರುಣಾಚಲಂ ಅವರು ಎಂಎನ್ಎಂ ತೊರೆದು ಬಿಜೆಪಿಗೆ ಜೈ ಎಂದಿರುವುದು ಕಮಲ್ ಹಾಸನ್ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಣೆಗಳು ತಿಳಿಸಿವೆ. ಚೆನ್ನೈನ ಬಿಜೆಪಿ ಕಚೇರಿಯಲ್ಲಿ ಅರುಣಾಚಲಂ ಅವರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಮಾತನಾಡಿರುವ ಪ್ರಕಾಶ್ ಜಾವಡೇಕರ್, ತಮಿಳುನಾಡಿನಲ್ಲಿ ಬಿಜೆಪಿ ಅದ್ಭುತವಾಗಿ ಕಾರ್ಯ ನಿರ್ವಹಿಸುತ್ತಿದೆ. ದೇಶದಲ್ಲಿ ಹಲವು ಪಕ್ಷಗಳಿಗೆ ತಮ್ಮ ಕುಟುಂಬವೇ ಮುಖ್ಯ ಎಂಬಂತೆ ಕುಟುಂಬ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಬಿಜೆಪಿಗೆ ಮಾತ್ರ ಪಕ್ಷವೇ ಕುಟುಂಬವಾಗಿದೆ ಎಂದು ತಿಳಿಸಿದ್ದಾರೆ. ತಮಿಳುನಾಡಿನಲ್ಲಿಯೂ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.