ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಎಲ್ಲಾ ನಿವಾಸಿಗಳಿಗೆ ಆರೋಗ್ಯ ವಿಮೆಯನ್ನು ವಿಸ್ತರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಆಯುಷ್ಮಾನ್ ಭಾರತ್ ಪಿಎಂ-ಜಯ್ ಸೇಹತ್ ಅನ್ನು ಪ್ರಾರಂಭಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಹ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಯೋಜನೆಯು ಯುನಿವರ್ಸಲ್ ಹೆಲ್ತ್ ಕವರೇಜ್ ಅನ್ನು ಖಚಿತಪಡಿಸುತ್ತದೆ ಮತ್ತು ತುರ್ತು ಆರೋಗ್ಯ ಪರಿಸ್ಥಿತಿಯಲ್ಲಿ ಹಣಕಾಸು ನೆರವು ಒದಗಿಸುತ್ತದೆ. ಎಲ್ಲಾ ವ್ಯಕ್ತಿಗಳು ಮತ್ತು ಸಮುದಾಯಗಳಿಗೆ ಗುಣಮಟ್ಟದ ಮತ್ತು ಕೈಗೆಟುಕುವ ಅಗತ್ಯ ಆರೋಗ್ಯ ಸೇವೆಗಳನ್ನು ಖಾತ್ರಿಪಡಿಸುತ್ತದೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, “ಜಮ್ಮು ಮತ್ತು ಕಾಶ್ಮೀರಕ್ಕೆ 7 ಹೊಸ ವೈದ್ಯಕೀಯ ಕಾಲೇಜುಗಳಿಗೆ ಅನುಮೋದನೆ ನೀಡಲಾಗಿದೆ. ಇಲ್ಲಿ ಎಂಬಿಬಿಎಸ್ ಸೀಟುಗಳನ್ನು ಎರಡು ಬಾರಿ ಹೆಚ್ಚು ಕಾಯ್ದಿರಿಸಲಾಗುವುದು. ಅನುಮೋದನೆ ಪಡೆದ 15 ಹೊಸ ನರ್ಸಿಂಗ್ ಕಾಲೇಜುಗಳು ಯುವಕರಿಗೆ ಹೊಸ ಅವಕಾಶಗಳನ್ನು ಒದಗಿಸಲಿವೆ” ಎಂದಿದ್ದಾರೆ.
“ಜಮ್ಮು ಮತ್ತು ಕಾಶ್ಮೀರದಲ್ಲಿ ಕೊರೋನಾ ವೈರಸ್ ಅನ್ನು ನಿರ್ವಹಿಸುತ್ತಿರುವ ರೀತಿ ಪ್ರಶಂಸನೀಯವಾಗಿದೆ. 3,000 ಕ್ಕೂ ಹೆಚ್ಚು ವೈದ್ಯರು, 14,000 ಕ್ಕೂ ಹೆಚ್ಚು ಅರೆವೈದ್ಯಕೀಯ ಸಿಬ್ಬಂದಿ ಮತ್ತು ಸಾವಿರಾರು ಆಶಾ ಕಾರ್ಯಕರ್ತೆಯರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ” ಎಂದಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.