ನವದೆಹಲಿ: ನ್ಯಾಷನಲ್ ಮಿಷನ್ ಫಾರ್ ಕ್ಲೀನ್ ಗಂಗಾ (ಎನ್ಎಂಸಿಜಿ) ಇದುವರೆಗೆ 22 ಯೋಜನೆಗಳನ್ನು ಪೂರ್ಣಗೊಳಿಸಿದೆ ಮತ್ತು ಒಟ್ಟು 557 ಕೋಟಿ ರೂಪಾಯಿಗಳ ವೆಚ್ಚದ ಒಳಚರಂಡಿ ಮೂಲಸೌಕರ್ಯ, ಮಾಲಿನ್ಯ ತಗ್ಗಿಸುವಿಕೆ, ಅರಣ್ಯ ಬೆಳೆಸುವಿಕೆ ಮತ್ತು ಜೀವವೈವಿಧ್ಯತೆಗೆ ಸಂಬಂಧಿಸಿದ 17 ಹೊಸ ಯೋಜನೆಗಳನ್ನು ಈ ವರ್ಷ ಮಂಜೂರು ಮಾಡಿದೆ.
ಜಿಲ್ಲಾ ಮಟ್ಟದ ಅಧಿಕಾರಿಗಳ ಶ್ರಮವನ್ನು ಗುರುತಿಸುವ ಸಲುವಾಗಿ ಪ್ರಥಮ ಬಾರಿಗೆ ಸಾರ್ವಜನಿಕ ಆಡಳಿತ ಯೋಜನೆಯ ಶ್ರೇಷ್ಠತೆಗಾಗಿ ನೀಡುವ ಪ್ರಧಾನ ಮಂತ್ರಿಗಳ ಪ್ರಶಸ್ತಿ ಅಡಿಯಲ್ಲಿ ನಮಾಮಿ ಗಂಗೆಯನ್ನು ಸೇರಿಸಲಾಗಿದೆ ಎಂದು ಜಲ ಶಕ್ತಿ ಸಚಿವಾಲಯ ತಿಳಿಸಿದೆ.
5, 334 ದೊಡ್ಡ ಅಣೆಕಟ್ಟುಗಳನ್ನು ಹೊಂದಿರುವ ಚೀನಾ ಮತ್ತು ಯುಎಸ್ಎ ನಂತರ ಭಾರತ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ. ಸುಮಾರು 411 ಅಣೆಕಟ್ಟುಗಳು ಭಾರತದಲ್ಲಿ ನಿರ್ಮಾಣ ಹಂತದಲ್ಲಿವೆ.
ದೇಶದ ನೀರಿನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಅಣೆಕಟ್ಟುಗಳು ಬಹಳ ಮುಖ್ಯವಾಗಿವೆ. ಈ ವರ್ಷದಲ್ಲಿ ರಾಜಸ್ಥಾನ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಮೂರು ಹೊಸ ಪ್ರವಾಹ ಮುನ್ಸೂಚನೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.