ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆದಿದ್ದು, 81% ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಕೊರೋನಾ ಆತಂಕದ ನಡುವೆಯೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಈ ಮತದಾನ ಪ್ರಕ್ರಿಯೆ ಯಶಸ್ವಿಯಾಗಿದೆ. ಕೆಲವೆಡೆ ಮತದಾನ ಬಹಿಷ್ಕಾರ, ಅಭ್ಯರ್ಥಿಗಳ ಚಿಹ್ನೆ ಬದಲು, ಕೆಲವು ಗೊಂದಲಗಳು ಏರ್ಪಟ್ಟಿದ್ದರೂ, ಹೆಚ್ಚಿನ ಕಡೆಗಳಲ್ಲಿ ಶಾಂತಿಯುತ ಮತದಾನ ನಡೆದಿದೆ. ಎರಡನೇ ಹಂತದಲ್ಲಿ 109 ತಾಲೂಕುಗಳಿಗೆ ಸಂಬಂಧಿಸಿದಂತೆ 2,709 ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆದಿದೆ. ಮತದಾರರು 1,05,431 ಮಂದಿ ಅಭ್ಯರ್ಥಿಗಳ ಹಣೆಬರಹವನ್ನು ನಿರ್ಧರಿಸಿದ್ದಾರೆ. ಡಿ. 30 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಗ್ರಾಮ ಪಂಚಾಯತ್ ಒಂದು ಮತ್ತು ಎರಡನೇ ಹಂತದ ಚುನಾವಣೆಯಲ್ಲಿ ಕಣಕ್ಕಿಳಿದ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತ ಪೆಟ್ಟಿಗೆಗಳಲ್ಲಿ ಭದ್ರವಾಗಿದೆ. ಮತ ಎಣಿಕೆ ಕೇಂದ್ರಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಡಿ. 30 ರಂದು ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.