ಅಮೇಥಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರ ವಿರುದ್ಧ ಕೆಟ್ಟ ಭಾಷೆ ಬಳಕೆ, ಸುಳ್ಳುಗಳನ್ನು ಬಿತ್ತುವ ಮೂಲಕ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನುಡಿದಿದ್ದಾರೆ.
ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಇಂತಹ ದುರ್ವರ್ತನೆಗೆ 2024 ರ ಚುನಾವಣೆಯಲ್ಲಿ ಮತದಾರರು ಉತ್ತರ ನೀಡಲಿದ್ದಾರೆ. ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯ್ ಬರೇಲಿ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಬಾಗಿಲು ಮುಚ್ಚಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2019 ರಲ್ಲಿ ರಾಹುಲ್ ಗಾಂಧಿ ಅಮೇಥಿಯನ್ನು ಕಳೆದುಕೊಂಡಿದ್ದರು. 2024 ರಲ್ಲಿ ರಾಯ್ಬರೇಲಿ ಸೋನಿಯಾ ಕೈತಪ್ಪಲಿದೆ ಎಂದು ಹೇಳಿದ್ದಾರೆ.
ಸ್ಮೃತಿ ಇರಾನಿ ಅವರು ಮೂರು ದಿನಗಳ ಅಮೇಥಿ ಪ್ರವಾಸದಲ್ಲಿದ್ದು, ಕ್ಷೇತ್ರದಲ್ಲಿ ನಡೆಯಲಿರುವ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಿದರು. ಚಿನ್ನದ ಅರಮನೆಯಲ್ಲಿರುವ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರಿಗೆ ಸಾಮಾನ್ಯ ರೈತರ ಬವಣೆ ಅರಿವಾಗಲು ಸಾಧ್ಯವಿಲ್ಲ ಎಂದು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಗೆ ಸ್ಮೃತಿ ಇರಾನಿ ಟಾಂಗ್ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.