ನವದೆಹಲಿ: ಮಾಜಿ ಸಚಿವ ದಿ. ಅರುಣ್ ಜೇಟ್ಲಿ ಅವರ 68 ನೇ ಜನ್ಮದಿನಾಚರಣೆಯ ಪ್ರಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೇಟ್ಲಿ ಅವರ 6 ಅಡಿ ಎತ್ತರದ ಪ್ರತಿಮೆಯನ್ನು ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ಅನಾವರಣ ಮಾಡಿ, ಅವರಿಗೆ ಗೌರವ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾ, ಅರುಣ್ ಜೇಟ್ಲಿ ಅವರು ಭಾರತೀಯ ರಾಜಕೀಯದಲ್ಲಿ ಮರೆಯಲಾರದ ಛಾಪು ಮೂಡಿಸಿದವರು. ರಾಜಕೀಯ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಈ ಹಿಂದೆ ಐತಿಹಾಸಿಕ ಕ್ರಿಕೆಟ್ ಪಂದ್ಯಾಟಗಳಿಗೆ ಹೆಸರಾದ ಈ ಸ್ಟೇಡಿಯಂನಲ್ಲಿ ಜೇಟ್ಲಿ ಅವರ ಪ್ರತಿಮೆ ಸ್ಥಾಪನೆಯಾಗಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಬಿಜೆಪಿಯ ಮರೆಯಾಗಿರುವ ಮರೆಯಲಾರದ ನಾಯಕ ಜೇಟ್ಲಿ ಅವರ ಜನ್ಮದಿನದ ಪ್ರಯುಕ್ತ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಸಹ ಟ್ವೀಟ್ ಮಾಡಿದ್ದು, ಅವರ ಬುದ್ಧಿವಂತಿಕೆ, ಕುಶಾಗ್ರಮತಿ, ದಣಿವರಿಯದ ವ್ಯಕ್ತಿತ್ವವನ್ನು ನೆನಪಿಸಿಕೊಳ್ಳುವ ಮೂಲಕ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
Unveiled a statue of Shri Arun Jaitley ji at New Delhi’s Arun Jaitley Stadium. His pioneering contribution in promoting cricket will never be forgotten. We will always miss him as an incredible person dedicated towards nation’s progress. My tributes to Arun ji on his jayanti. pic.twitter.com/DOIclIfrCM
— Amit Shah (@AmitShah) December 28, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.