ಲಕ್ನೋ: ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಕಾಲೇಜೊಂದರ 6 ಮಂದಿ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲು ಮಾಡಲಾಗಿದೆ.
ಕಾಲೇಜಿನಲ್ಲಿ ಚುನಾವಣೆ ನಡೆಸುವಂತೆ ಆಗ್ರಹಿಸಿ ಇಲ್ಲಿನ ಸಾಕೇತ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಕಾಲೇಜಿನ ಆವರಣದಲ್ಲಿಯೇ ಈ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ದೇಶದ್ರೋಹಿ ಘೋಷಣೆಗಳನ್ನು ಕೂಗಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಪಡೆದೇ ತೀರುತ್ತೇವೆ ಎಂಬ ಘೋಷಣೆ ಕೂಗಿದ್ದಾಗಿ ಪ್ರಾಂಶುಪಾಲರು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳು ಹಿಂಸಾಚಾರದ ಘೋಷಣೆಗಳನ್ನು ಕೂಗಿದ್ದರು. ಮಾತೃಭೂಮಿಯ ರಕ್ಷಣೆ ದೇಶದ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ.
ಈ ಆರೋಪವನ್ನು ತಳ್ಳಿ ಹಾಕಿರುವ ವಿದ್ಯಾರ್ಥಿಗಳು ನಾವು ಭ್ರಷ್ಟ ಪ್ರಾಂಶುಪಾಲ ಮತ್ತು ವಿದ್ಯಾರ್ಥಿ ವಿರೋಧಿ ವ್ಯವಸ್ಥೆಯಿಂದ ಸ್ವಾತಂತ್ರ್ಯ ಬಯಸಿದ್ದೇವೆ ಎಂದು ಘೋಷಣೆ ಕೂಗಿದ್ದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.