ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾಭಿಮುಖವಾದ ಬೋಧನೆಗೆ ಪ್ರಾಶಸ್ತ್ಯ ನೀಡುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಮುಂದಿನ ಪದವಿಪೂರ್ವ ಶಿಕ್ಷಣಕ್ಕೆ ಅನುಕೂಲವಾಗುವಂತೆ ಪ್ರಸಕ್ತ ಸಾಲಿನಲ್ಲಿ ಬೋಧನಾ ಕ್ರಮವನ್ನು ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಕನಿಷ್ಟ ಜ್ಞಾನ, ಪರೀಕ್ಷಾಭಿಮುಖವಾಗಿ ಅವಶ್ಯಕವಾಗುವ ಪಠ್ಯಗಳನ್ನು ನಿರ್ಧರಿಸಿ ಬೋಧನೆ ನಡೆಸಲಾಗುವುದು. ಇದಕ್ಕೆ ಪೂರಕವಾಗಿ ಎಂಬಂತೆ ಸಮಯದ ಲಭ್ಯತೆಯನ್ನು ಪರಿಗಣಿಸಿ ಮುಂದಿನ ಒಂದು ವಾರಗಳಲ್ಲಿ ಪಠ್ಯಗಳನ್ನು ನಿರ್ಧರಿಸಿ, ಪ್ರಕಟಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ತಾಂತ್ರಿಕ ಸಮಿತಿಯ ಮಾರ್ಗದರ್ಶನದಂತೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆಯಂತೆ 2021 ರ ಜನವರಿ 1 ರಂದು ಶಾಲಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿಯೂ ರಾಜ್ಯದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.