ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಶಿವಾಜಿನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಲಾಗಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ನೂತನ ಕಟ್ಟಡವನ್ನು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ರಾಜ್ಯಕ್ಕೆ ಹೆಚ್ಚು ವೈದ್ಯರ ಅಗತ್ಯತೆ ಇರುವುದರಿಂದ ಅಧಿಕ ಪ್ರಮಾಣದಲ್ಲಿ ವೈದ್ಯಕೀಯ ಕಾಲೇಜುಗಳನ್ನು ನಿರ್ಮಾಣ ಮಾಡಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 6 ವರ್ಷಗಳಲ್ಲಿ ದೇಶದಲ್ಲಿ ಸುಮಾರು 157 ರಷ್ಟು ಮೆಡಿಕಲ್ ಕಾಲೇಜುಗಳನ್ನು ನಿರ್ಮಾಣ ಮಾಡಿಸಿದ್ದಾರೆ. ದೇಶದಲ್ಲಿ 22 ಏಮ್ಸ್ ಸಂಸ್ಥೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ ದಿನಗಳಲ್ಲಿ ದೇಶದ ಪ್ರತಿಯೊಂದು ರಾಜ್ಯದಲ್ಲಿಯೂ ಏಮ್ಸ್ ನಿರ್ಮಾಣ ಮಾಡುವ ಆಶಯವನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ರಾಜ್ಯದಲ್ಲಿಯೂ ಏಮ್ಸ್ ಸಿಗುವ ಸಾಧ್ಯತೆ ಇರುವುದಾಗಿಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.