ನವದೆಹಲಿ: ಹೊಸದಾಗಿ ವಿನ್ಯಾಸಗೊಳಿಸಲಾದ ವಿಸ್ಟಾಡೋಮ್ ಟೂರಿಸ್ಟ್ ಕೋಚ್ ಪ್ರಯೋಗದ ಸಮಯದಲ್ಲಿ ಗಂಟೆಗೆ 180 ಕಿಲೋಮೀಟರ್ ವೇಗದಲ್ಲಿ ಯಶಸ್ವಿಯಾಗಿ ಸಂಚರಿಸಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಈ ಕೋಚ್ ರೈಲು ಪ್ರಯಾಣವನ್ನು ಪ್ರಯಾಣಿಕರಿಗೆ ಸ್ಮರಣೀಯವಾಗಿಸುತ್ತದೆ ಮತ್ತು ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುತ್ತದೆ ಎಂದು ಟ್ವೀಟ್ ನಲ್ಲಿ ಗೋಯಲ್ ಅಭಿಪ್ರಾಯಿಸಿದ್ದಾರೆ.
ಯುನೆಸ್ಕೋ ವಿಶ್ವ ಪರಂಪರೆಯ ತಾಣ ತಮಿಳುನಾಡಿನ ನೀಲಗಿರಿ ಪರ್ವತ ರೈಲ್ವೆ ಈ ವರ್ಷ ಡಿಸೆಂಬರ್ 31 ರಿಂದ ಪುನರಾರಂಭಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಬಂಗಾಂವ್-ಪೆಟ್ರಾಪೋಲ್ ನಡುವೆ ಹೊಸದಾಗಿ ವಿದ್ಯುದ್ದೀಕರಿಸಿದ ಮಾರ್ಗದಲ್ಲಿ ಭಾರತೀಯ ರೈಲ್ವೆ ಎಲೆಕ್ಟ್ರಿಕ್ ಲೊಕೊವನ್ನು ಯಶಸ್ವಿಯಾಗಿ ಪ್ರಯೋಗಿಸಿದೆ ಎಂದು ಅವರು ಮಾಹಿತಿ ನೀಡಿದರು. ರಾಜ್ಯದ ಆರ್ಥಿಕತೆಯನ್ನು ವೃದ್ಧಿಸುವ ಸಲುವಾಗಿ ಪಶ್ಚಿಮ ಬಂಗಾಳದ ರೈಲು ಮೂಲಸೌಕರ್ಯವನ್ನು ಪರಿವರ್ತಿಸಲು ರೈಲ್ವೆ ಮಿಷನ್ ಮೋಡ್ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಗೋಯಲ್ ಹೇಳಿದ್ದಾರೆ.
Ending the Year on a Great Note: Indian Railways' 🚆 successfully completed 180 kmph speed trial of new design Vistadome tourist coach
These coaches will make train journeys memorable for the passengers 🛤️ & give further boost to tourism 🚞 pic.twitter.com/3JxeVbQClg
— Piyush Goyal (@PiyushGoyal) December 29, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.