ಬೆಂಗಳೂರು: ಕರ್ನಾಟಕದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, 5,728 ಗ್ರಾಮ ಪಂಚಾಯಿತಿಗಳಿಗೆ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿದೆ.
ಇವಿಎಂಗಳನ್ನು ಬಳಸಿದ ಬೀದರ್ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ಕಡೆ ಮತದಾನಕ್ಕೆ ಮತಪತ್ರಗಳನ್ನು ಬಳಸಲಾಗಿದ್ದರಿಂದ ಫಲಿತಾಂಶಗಳು ತಡವಾಗಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ 226 ತಾಲೂಕುಗಳ 5,728 ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 91,339 ಸ್ಥಾನಗಳಿದ್ದು, 43,238 ಸ್ಥಾನಗಳಲ್ಲಿ ಮೊದಲ ಹಂತದಲ್ಲಿ ಮತದಾನಕ್ಕೆ ನಡೆದಿತ್ತು, ಎರಡನೇ ಹಂತದಲ್ಲಿ 39,378 ಸ್ಥಾನಗಳಿಗೆ ಮತದಾನ ನಡೆಯಿತು. 8,074 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಒಟ್ಟು 2,22,814 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.
ಮೊದಲ ಹಂತದಲ್ಲಿ ಶೇಕಡಾ 82 ರಷ್ಟು ಮತದಾನ ದಾಖಲಾಗಿದ್ದರೆ, ಎರಡನೇ ಹಂತದಲ್ಲಿ ಶೇ.80 ರಷ್ಟು ಮತದಾನವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.