ಬೆಂಗಳೂರು: ಕರ್ನಾಟಕದಲ್ಲಿಯೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಹಿನ್ನೆಲೆಯಲ್ಲಿ ಇಲಾಖೆಯಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ರಾಜ್ಯಪಾಲರು ಅಂಕಿತ ಹಾಕಿದ ತಕ್ಷಣದಲ್ಲೇ ಇಲಾಖೆ ತೀವ್ರಗತಿಯಲ್ಲಿ ಗೋವುಗಳ ಸಂರಕ್ಷಣೆಗೆ ಕಾರ್ಯಾಚರಿಸಲಿದೆ ಎಂದು ಅವರು ತಿಳಿಸಿದ್ದಾರೆ. ಸದ್ಯ ರಾಜ್ಯದಲ್ಲಿ ವಿದೇಶಿ ತಳಿಯ ಗಂಡು ಕರುಗಳನ್ನು ಕಟುಕರಿಗೆ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಹೊಸ ಕಾಯ್ದೆಯನ್ವಯ ಇದಕ್ಕೆ 6 ವರ್ಷಗಳ ಶಿಕ್ಷೆ ಇದೆ. ಪಶುಪಾಲಕರು ಗಂಡು ಕರುಗಳನ್ನು ಕನಿಷ್ಟ 6 ತಿಂಗಳುಗಳ ಕಾಲ ಸಾಕಿ ಬಳಿಕ ಗೋಶಾಲೆಗೆ ನೀಡಿ ಎಂದು ಸಚಿವರು ಮನವಿ ಮಾಡಿದ್ದಾರೆ.
ಜೊತೆಗೆ ರೈತರಲ್ಲಿ, ಪಶುಪಾಲಕರಲ್ಲಿ ವಯಸ್ಸಾದ ಗೋವುಗಳಿದ್ದಲ್ಲಿ ಅವುಗಳನ್ನು ಗೋಶಾಲೆಗೆ ನೀಡುವ ಮೂಲಕ ಗೋವುಗಳನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ 159 ಗೋಶಾಲೆಗಳಿದ್ದು ಅವುಗಳಲ್ಲಿ 75 ಕ್ಕೂ ಹೆಚ್ಚು ಗೋಶಾಲೆಗಳಿಗೆ ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಹೊಸ ಗೋಶಾಲೆಗಳನ್ನು ಆರಂಭಿಸುವವರಿಗೂ ಸರ್ಕಾರ ಪ್ರೋತ್ಸಾಹ ನೀಡಲಿದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.