ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಿದ ಆಕಾಶ್ ಕ್ಷಿಪಣಿ ವ್ಯವಸ್ಥೆಯನ್ನು ರಫ್ತು ಮಾಡುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಘೋಷಣೆಯನ್ನು ಮಾಡಿದ್ದಾರೆ.
ವೇಗವಾಗಿ ಅನುಮೋದನೆಯನ್ನು ನೀಡಲು ಸಮಿತಿಯನ್ನು ಸ್ಥಾಪಿಸುವುದಕ್ಕೆ ಕೂಡ ಸಂಪುಟ ಅನುಮೋದನೆಯನ್ನು ನೀಡಿದೆ.
“ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯು ಇಂದು ಆಕಾಶ್ ಕ್ಷಿಪಣಿ ವ್ಯವಸ್ಥೆಯನ್ನು ರಫ್ತು ಮಾಡಲು ಅನುಮೋದನೆ ನೀಡಿದೆ ಮತ್ತು ಕ್ಷಿಪ್ರ ಅನುಮೋದನೆಗಾಗಿ ಸಮಿತಿಯನ್ನು ರಚಿಸಲೂ ಕೂಡ ಅನುಮೋದನೆ ನೀಡಿದೆ” ಎಂದು ಸಿಂಗ್ ಹೇಳಿದ್ದಾರೆ.
ಆಕಾಶ್ ಕ್ಷಿಪಣಿ ವ್ಯವಸ್ಥೆಯ ರಫ್ತು ಆವೃತ್ತಿಯು ಭಾರತೀಯ ಸಶಸ್ತ್ರ ಪಡೆಗಳಲ್ಲಿ ನಿಯೋಜಿಸಲಾಗಿರುವ ವ್ಯವಸ್ಥೆಯಿಂದ ಭಿನ್ನವಾಗಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
“ಆಕಾಶ್ ದೇಶದ ಪ್ರಮುಖ ಕ್ಷಿಪಣಿಯಾಗಿದ್ದು, ಇದು ಶೇಕಡಾ 96 ರಷ್ಟು ದೇಶೀಯತೆ ಹೊಂದಿದೆ. ಆಕಾಶ್ 25 ಕಿ.ಮೀ ವ್ಯಾಪ್ತಿಯ ಮೇಲ್ಮೈಯಿಂದ ವಾಯು ಕ್ಷಿಪಣಿಯಾಗಿದೆ” ಎಂದಿದ್ದಾರೆ.
Under the #AtmaNirbharBharat, India is growing in its capabilities of manufacturing wide variety of Defence platforms & missiles.
The Cabinet chaired by PM @narendramodi ji today approved the export of Akash Missile System and a Committee for faster Approvals has been created.
— Rajnath Singh (@rajnathsingh) December 30, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.