ನವದೆಹಲಿ: ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ಉಳಿತಾಯ ಮಾಡಲು ಪೋಷಕರನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಇದುವರೆಗೆ ದೇಶದಲ್ಲಿ 1 ಕೋಟಿ 83 ಲಕ್ಷ ಖಾತೆಗಳನ್ನು ತೆರೆಯಲಾಗಿದೆ.
ದೇಶದಲ್ಲಿ ಇದುವರೆಗೆ 1 ಕೋಟಿ 83 ಲಕ್ಷ ಸುಕನ್ಯಾ ಸಮೃದ್ಧಿ ಖಾತೆಗಳನ್ನು ತೆರೆಯಲಾಗಿದೆ. ಈ ಖಾತೆಗಳಲ್ಲಿ 58,222 ಕೋಟಿ ರೂಪಾಯಿ ಜಮೆ ಆಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
2015ರಲ್ಲಿ ಈ ಯೋಜನೆಯನ್ನು ಹರಿಯಾಣದ ಪಾಣಿಪತ್ನಲ್ಲಿ ಪ್ರಾರಂಭಿಸಲಾಗಿದೆ. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಖಚಿತಪಡಿಸುವುದು, ವಿವಾಹ ವೆಚ್ಚಕ್ಕೆ ಉಳಿತಾಯ ಇದರ ಉದ್ದೇಶವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.