ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಪಾಕಿಸ್ಥಾನದ ಪರವಾಗಿ ಜಿಂದಾಬಾದ್ ಘೋಷಣೆ ಕೂಗಿದ ಎಸ್ಡಿಪಿಐ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿದ್ದು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಎಸ್ಡಿಪಿಐ ಕಾರ್ಯಕರ್ತರನ್ನು ಬಂಧನಕ್ಕೆ ಒಳಪಡಿಸಿದ್ದಾರೆ.
ಎಸ್ಡಿಪಿಐ ಅಭ್ಯರ್ಥಿ ಜಯ ಗಳಿಸಿದ ಸಂದರ್ಭದಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪಾಕಿಸ್ಥಾನದ ಪರವಾಗಿ ಘೋಷಣೆ ಹಾಕಿದ್ದರು. ʼಪಾಕಿಸ್ಥಾನ್ ಜಿಂದಾಬಾದ್ʼ ಘೋಷಣೆ ಕೇಳಿ ಬಂದಿತ್ತು. ಈ ಘಟನೆಗೆ ವ್ಯಾಪಕವಾದ ಖಂಡನೆ ವ್ಯಕ್ತವಾಗಿದೆ.
ಬೆಳ್ತಂಗಡಿ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.