ಬೆಂಗಳೂರು: ನಗರದ ಪಾದರಾಯನಪುರ ಅಡ್ಡ ರಸ್ತೆಗಳಿಗೆ ಕೇವಲ ಮುಸ್ಲಿಮರ ಹೆಸರಿಡಲು ಬಿಬಿಎಂಪಿ ಮುಂದಾಗಿದ್ದು, ಈ ನಿರ್ಧಾರಕ್ಕೆ ಸಂಸದ, ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಇನ್ನೂ ಅನೇಕ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪಾದರಾಯನಪುರದಲ್ಲಿನ ಅಡ್ಡ ರಸ್ತೆಗಳಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡವರ ಹೆಸರನ್ನಿಡಬೇಕು ಎಂಬ ನಿರ್ಧಾರ ಕೈಗೊಳ್ಳಲಾಗಿತ್ತು. ಪ್ರಸ್ತುತ ಕೇವಲ ಮುಸ್ಲಿಮರ ಹೆಸರುಗಳನ್ನು ಮಾತ್ರ ಶಿಫಾರಸು ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಇದು ಒಂದು ಕೋಮಿನ ತುಷ್ಟೀಕರಣವಾಗಿದೆ ಎಂದು ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸಮಾಜ ಸೇವೆ ಮಾಡಿದ ಅನೇಕ ಗಣ್ಯರಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು, ಸೈನಿಕರು, ರಾಷ್ಟ್ರದ ಮಹಾನ್ ವ್ಯಕ್ತಿಗಳ ಹೆಸರುಗಳನ್ನು ಇರಿಸುವುದಕ್ಕೆ ಬೆಂಬಲವಿದೆ. ಆದರೆ ಕೇವಲ ಮುಸ್ಲಿಮರ ಹೆಸರನ್ನಿಡುವುದಕ್ಕೆ ತೀವ್ರ ವಿರೋಧವಿರುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.