ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು 60% ಗಳಷ್ಟು ಜಯ ಗಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಶಕ್ತಿ ದಿನೇ ದಿನೇ ಬಲಿಷ್ಠವಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಅಭಿವೃದ್ಧಿಯ ಆಶಯವನ್ನಿರಿಸಿಕೊಂಡು ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ರೈತರ ಆದಾಯ ಹೆಚ್ಚು ಮಾಡುವುದಕ್ಕೂ ಪೂರಕ ಕ್ರಮ ಕೈಗೊಂಡಿದ್ದೇವೆ. ಪ್ರತಿಪಕ್ಷಗಳು ಇಲ್ಲಸಲ್ಲದ ಸುಳ್ಳುಗಳನ್ನು ಹಬ್ಬಿಸುವ ಮೂಲಕ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಜೊತೆಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗೂ ಸ್ಪಷ್ಟನೆ ನೀಡಿರುವ ಅವರು, ನಾಯಕತ್ವ ಗೊಂದಲ ಕೇವಲ ಮಾಧ್ಯಮ ಸೃಷ್ಟಿ. ಮುಂದಿನ ಎರಡೂವರೆ ವರ್ಷಗಳ ಅವಧಿಗೆ ನಾನೇ ಸಿಎಂ ಆಗಿರಲಿದ್ದೇನೆ. ಈ ವರೆಗಿನ ಆಡಳಿತದಲ್ಲಿಯೂ ಅಭಿವೃದ್ಧಿಗೆ ಕಾಳಜಿ ವಹಿಸಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.