ಶಿವಮೊಗ್ಗ: ರಾಜ್ಯದ ಹೆಚ್ಚಿನ ಗ್ರಾಮ ಪಂಚಾಯತ್ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಸಚಿವ ಈಶ್ವರಪ್ಪ, ನಾವು ಗೋಮಾಂಸ ತಿನ್ನುತ್ತೇವೆ. ನೀವೇನು ಮಾಡುತ್ತೀರಿ ಎಂದು ಪ್ರಶ್ನಿಸಿದವರಿಗೆ ಗ್ರಾಮಗಳ ಜನರು ಬೆಂಬಲಿಸಿಲ್ಲ. ಗೋ ಮಾತೆಗೆ ಗೌರವ ನೀಡುವವರಿಗೆ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಭಾರತದಲ್ಲಿದ್ದುಕೊಂಡು ಪಾಕಿಸ್ಥಾನಕ್ಕೆ ಜಯಕಾರ ಹಾಕುವವರಿಗೆ ಬೆಂಬಲ ಸಿಕ್ಕಿಲ್ಲ. ಹಿಂದೂಸ್ಥಾನಕ್ಕೆ ಜಯಕಾರ ಹಾಕುವವರಿಗೆ ಬೆಂಬಲ ನೀಡಿದ್ದಾರೆ. ರಾಮ ಭಕ್ತರಿಗೆ ರಾಜ್ಯದ ಜನ ಬೆಂಬಲ ನೀಡಿದ್ದಾರೆಯೇ ಹೊರತು, ಹನುಮ ಜಯಂತಿಯಂದು ಮಾಂಸ ತಿನ್ನುವವರಿಗಲ್ಲ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ. ಆದ್ದರಿಂದಲೇ ಕಾಂಗ್ರೆಸ್ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಕಡೆಗಳಲ್ಲಿ ಪರಾಜಯಗೊಂಡಿದೆ. ಬಿಜೆಪಿ ರಾಜ್ಯದ ಹೆಚ್ಚಿನ ಗ್ರಾಮ ಪಂಚಾಯತ್ಗಳಲ್ಲಿ ಅತೀ ಹೆಚ್ಚು ಸ್ಥಾನಗಳಲ್ಲಿ ಜಯ ಗಳಿಸಿದೆ. ರಾಜ್ಯದಲ್ಲಿ ಬಿಜೆಪಿಯು ಭದ್ರವಾಗಿರುವುದಕ್ಕೆ ಇದೇ ಸಾಕ್ಷಿ ಎಂದು ಈಶ್ವರಪ್ಪ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.