ನವದೆಹಲಿ: ಜಗತ್ತು 2021ಕ್ಕೆ ಕಾಲಿಟ್ಟಿದೆ. 2020ರ ಕಹಿ ನೆನಪನ್ನು ಮರೆತು ಜನರು ಹೊಸ ಕ್ಯಾಲೆಂಡರ್ ವರ್ಷವನ್ನು ಸ್ವಾಗತಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೂ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
ನಮ್ಮ ರಾಷ್ಟ್ರದ ಪ್ರಗತಿಯ ಸಾಮಾನ್ಯ ಗುರಿಯನ್ನು ಸಾಧಿಸಲು ದೇಶವು ಹೊಸ ಶಕ್ತಿಯೊಂದಿಗೆ ಮುನ್ನಡೆಯುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ ಮೋದಿ, “ಭರವಸೆಯ ಮನೋಭಾವ ಮತ್ತು ಸ್ವಾಸ್ಥ್ಯ ಮೇಲುಗೈ ಸಾಧಿಸಲಿ” ಎಂದು ಟ್ವಟ್ನಲ್ಲಿ ಹಾರೈಸಿದರು.
“ನಿಮಗೆ 2021 ರ ಶುಭಾಶಯಗಳು! ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಭರವಸೆ ಮತ್ತು ಸ್ವಾಸ್ಥ್ಯದ ಮನೋಭಾವ ಮೇಲುಗೈ ಸಾಧಿಸಲಿ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿಗಳು ಟ್ವಿಟ್ ಮಾಡಿ, “ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು! ಹೊಸ ವರ್ಷವು ಹೊಸ ಆರಂಭವನ್ನು ಮಾಡಲು ಮತ್ತು ವೈಯಕ್ತಿಕ ಮತ್ತು ಸಾಮೂಹಿಕ ಅಭಿವೃದ್ಧಿ ಸಾಧಿಸಲು ಅವಕಾಶವನ್ನು ಒದಗಿಸುತ್ತದೆ. ಕೋವಿಡ್-19 ಪರಿಸ್ಥಿತಿಯಿಂದ ಉಂಟಾದ ಸವಾಲುಗಳನ್ನು ಒಗ್ಗಟ್ಟಿನಿಂದ ಪರಿಹರಿಸಿ ಮುಂದುವರಿಸುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದಿದ್ದಾರೆ.
Wishing you a happy 2021!
May this year bring good health, joy and prosperity.
May the spirit of hope and wellness prevail.
— Narendra Modi (@narendramodi) January 1, 2021
Happy New Year everyone!
New Year provides an opportunity to make a fresh beginning and resolve for individual and collective development.
Challenges arising out of COVID-19 situation strengthen our determination to move forward unitedly.
— President of India (@rashtrapatibhvn) January 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.